ರಾಮಕುಂಜ: ಸಾರ್ವಜನಿಕ ಆರಾಧನಾ ಸಮಿತಿ, ಪಂಜ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಆಶ್ರಯದಲ್ಲಿ ಸಾರ್ವಜನಿಕ ಶ್ರೀ ಗಣೇಶೋತ್ಸವದ ಪ್ರಯುಕ್ತ ನಡೆದ ಕಬಡ್ಡಿ ಪಂದ್ಯಾಟದಲ್ಲಿ ಶ್ರೀ ರಾಮಕುಂಜೇಶ್ವರ ಕನ್ನಡ ಮಾಧ್ಯಮ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಹಾಗೂ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದುಕೊಂಡಿದೆ.
ವಿದ್ಯಾರ್ಥಿಗಳಿಗೆ ಮಾಧವ ಬಿ.ಕೆ., ಜಸ್ವಂತ್ ಹಾಗೂ ಮಂಜುನಾಥ್‌ರವರು ತರಬೇತಿ ನೀಡಿದ್ದರು. ಮುಖ್ಯಗುರು ಸತೀಶ್ ಭಟ್ ಹಾಗೂ ದೈಹಿಕ ಶಿಕ್ಷಣ ಶಿಕ್ಷಕಿ ಪ್ರಫುಲ್ಲ ರೈ ಅವರು ಮಾರ್ಗದರ್ಶನ ನೀಡಿದ್ದರು. ಈ ಸಂದರ್ಭದಲ್ಲಿ ಎಸ್‌ಆರ್‌ಕೆ ಲ್ಯಾಡರ್ಸ್ ಮಾಲಕ ಕೇಶವ ಅಮೈ ಇವರು ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.