ಕಾಣಿಯೂರು: 2024-25ನೇ ಆರ್ಥಿಕ ವರ್ಷಾಂತ್ಯಕ್ಕೆ ಸಾಲ ವಸೂಲಾತಿ ಗುರಿಯಲ್ಲಿ ಶೇಕಡಾ 100 ಸಾಧನೆ ಮಾಡಿರುವ ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆ.30ರಂದು ಮಂಗಳೂರಿನಲ್ಲಿ ನಡೆದ ಎಸ್.ಸಿ.ಡಿ.ಸಿ.ಸಿ ಬ್ಯಾಂಕ್ ನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಎಸ್ ಸಿಡಿಸಿಸಿ ಬ್ಯಾಂಕ್ ನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಗಣೇಶ್ ಉದನಡ್ಕ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಅಶೋಕ್ ಗೌಡರವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಸ್ ಸಿ ಡಿ ಸಿ ಸಿ ಬ್ಯಾಂಕ್ ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ ಜಯರಾಮ ರೈ ಬಳಜ್ಜ, ಮನ್ಮಥ ಎಸ್.ಎನ್, ಕುಶಾಲಪ್ಪ ಗೌಡ ಪೂವಾಜೆ, ಚಾರ್ವಾಕ ಪ್ರಾ.ಕೃ.ಪ.ಸ.ಸಂಘದ ಉಪಾಧ್ಯಕ್ಷ ಬಾಲಕೃಷ್ಣ ಗೌಡ ಇಡ್ಯಡ್ಕ, ನಿರ್ದೇಶಕರಾದ ಅನಂತಕುಮಾರ್ ಬೈಲಂಗಡಿ, ವಿಶ್ವನಾಥ ಕೂಡಿಗೆ, ಪರಮೇಶ್ವರ ಅನಿಲ, ಸುಂದರ ದೇವಸ್ಯ, ವೀಣಾ ಅಂಬುಲ, ಶೀಲಾವತಿ ಮುಗರಂಜ, ಸಿಬ್ಬಂದಿಗಳಾದ ವಾಣಿ, ವೇಣುಗೋಪಾಲ್ ಮತ್ತಿತರರು ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ಚಾರ್ವಾಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಎಸ್. ಸಿ.ಡಿ.ಸಿ.ಸಿ ಬ್ಯಾಂಕ್ ಪ್ರಶಸ್ತಿ ಪ್ರದಾನ