ಕಾವು:2023-24ನೇ ಆರ್ಥಿಕ ವರ್ಷದಲ್ಲಿ ಸಂಘವು ಅತ್ಯುತ್ತಮ ಕಾರ್ಯನಿರ್ವಹಣೆಯೊಂದಿಗೆ ಬ್ಯಾಂಕಿಂಗ್ ಸೇರಿದಂತೆ ಎಲ್ಲಾ ವಿಭಾಗದಲ್ಲೂ ಗಣನೀಯ ಪ್ರಗತಿ ಮತ್ತು ಸೇವೆಯನ್ನು ಪರಿಗಣಿಸಿ ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ. ಬೆಂಗಳೂರು ಇವರಿಂದ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿ ಮತ್ತು 2024-25ನೇ ಆರ್ಥಿಕ ವರ್ಷಾಂತ್ಯಕ್ಕೆ ಸಾಲ ವಸೂಲಾತಿ ಗುರಿಯಲ್ಲಿ ಶೇ.100 ಸಾಧನೆ ಮಾಡಿದ ತಾಲೂಕಿನ ಏಕೈಕ ಸಹಕಾರಿ ಸಂಘವಾದ ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಆ.30ರಂದು ಮಂಗಳೂರಿನಲ್ಲಿ ನಡೆದ ಎಸ್ಸಿಡಿಸಿಸಿ ಬ್ಯಾಂಕಿನ ಮಹಾಸಭೆಯಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಎಸ್ಸಿಡಿಸಿಸಿ ಬ್ಯಾಂಕ್ನ ಅಧ್ಯಕ್ಷ ಡಾ. ಎಂ.ಎನ್ ರಾಜೇಂದ್ರ ಕುಮಾರ್ರವರು ಕಾವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವಮೂರ್ತಿ ಪಿ.ಜಿರವರಿಗೆ ಶಾಲು ಹೊದಿಸಿ, ಸ್ಮರಣಿಕೆ, ಪ್ರಶಸ್ತಿ ಪತ್ರ ನೀಡಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಎಸ್ಸಿಡಿಸಿಸಿ ಬ್ಯಾಂಕ್ನ ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ ಜಯರಾಮ ರೈ ಬಳಜ್ಜ, ಕಾವು ಸಹಕಾರ ಸಂಘದ ನಿರ್ದೇಶಕ ಲೋಹೀತ್ ಅಮ್ಚಿನಡ್ಕ, ಲೆಕ್ಕಿಗ ಅಭಿಷೇಕ್ ಪಿ.ಎಸ್ರವರು ಉಪಸ್ಥಿತರಿದ್ದರು.