ಪುತ್ತೂರು: ಒಳಮೊಗ್ರು ಗ್ರಾಮದ ಕುಂಬ್ರ ಶ್ರೀ ರಾಮ ಭಜನಾ ಮಂದಿರದ 44ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವಕ್ಕೆ ಸಂಸದ ಕ್ಯಾ.ಬ್ರಿಜೇಶ್ ಚೌಟರವರು ಆ.29ರಂದು ಸಂಜೆ ಭೇಟಿ ನೀಡಿದರು. ಶ್ರೀ ಗಣೇಶ ದೇವರ ದರ್ಶನ ಪಡೆದ ಇವರಿಗೆ ಸಮಿತಿ ವತಿಯಿಂದ ಪ್ರಸಾದ ನೀಡಿ ಸತ್ಕರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಗ್ರಾಮಾಂತರ ಮಂಡಲ ಅಧ್ಯಕ್ಷ ದಯಾನಂದ ಶೆಟ್ಟಿ ಉಜಿರುಮಾರು, ಶ್ರೀರಾಮ ಭಜನಾ ಮಂದಿರದ ಆಡಳಿತ ಸಮಿತಿ ಅಧ್ಯಕ್ಷ ಮೋನಪ್ಪ ಪೂಜಾರಿ ಬಡಕ್ಕೋಡಿ, ಉಪಾಧ್ಯಕ್ಷ ರತನ್ ರೈ ಕುಂಬ್ರ, ಪ್ರ.ಕಾರ್ಯದರ್ಶಿ ಹರೀಶ್ ರೈ ಮುಗೇರು, ಶ್ರೀ ಗಣೇಶೋತ್ಸವ ಸಮಿತಿ ಸಂಚಾಲಕ ರಾಜೇಶ್ ರೈ ಪರ್ಪುಂಜ, ಸಮಿತಿ ಜತೆ ಕಾರ್ಯದರ್ಶಿ ಸುಷ್ಮಾ, ಶ್ರೀ ಕೃಷ್ಣ ಜನ್ಮಾಷ್ಠಮಿ ಸಂಚಾಲಕಿ ಉಷಾ ನಾರಾಯಣ್, ಟೆಲಿಕಾಂ ಜಿಲ್ಲಾ ಸಲಹಾ ಸಮಿತಿ ಸದಸ್ಯ ನಿತೀಶ್ ಕುಮಾರ್ ಶಾಂತಿವನ, ಸಮಿತಿ ಮಾಜಿ ಅಧ್ಯಕ್ಷ ಪದ್ಮನಾಭ ರೈ ಅರೆಪ್ಪಾಡಿ, ಅನಿಲ್ ರೈ ಬಾರಿಕೆ, ಕುಂಬ್ರ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ್ಚಂದ್ರ ರೈ ಕೈಕಾರ, ಉದ್ಯಮಿ ಸಂತೋಷ್ ಕುಮಾರ್ ರೈ ಕೈಕಾರ, ವಕೀಲ ವಿರೂಪಾಕ್ಷ ಭಟ್, ಮೇಘರಾಜ್ ಕುಂಬ್ರ, ಚಂದ್ರಶೇಖರ ರಾವ್ ಮತ್ತಿತರರು ಉಪಸ್ಥಿತರಿದ್ದರು.