ಪುತ್ತೂರು: ಫರಂಗಿಪೇಟೆ ಹಿಂದೂ ಧಾರ್ಮಿಕ ಸೇವಾ ಸಮಿತಿಯ ವತಿಯಿಂದ ನಡೆದ 43 ನೇ ವರ್ಷದ ಗಣೇಶೋತ್ಸವದ ಸಮಾರೋಪ ಸಮಾರಂಭದಲ್ಲಿ ಹಿರಿಯ ಕಲಾವಿದ, ರಂಗಕರ್ಮಿ ಮಂಜು ವಿಟ್ಲ ದತ್ತಿ ನಿಧಿ ಪ್ರಶಸ್ತಿಯನ್ನು ನೃತ್ಯ ಹಾಗೂ ರಂಗಭೂಮಿ ಕಲಾವಿದೆ, ನಾಟ್ಯರಂಗ ಪುತ್ತೂರು ಸಂಸ್ಥೆಯ ನಿರ್ದೇಶಕಿ ವಿದುಷಿ ಮಂಜುಳಾ ಸುಬ್ರಹ್ಮಣ್ಯ ಅವರಿಗೆ ಪ್ರದಾನ ಮಾಡಲಾಯಿತು.
ವೇದಿಕೆಯಲ್ಲಿ ಗಣ್ಯರಾದ ಆಳ್ವಾಸ್ ಎಜುಕೇಶನ್ ಟ್ರಸ್ಟ್ ಚೇರ್ ಮನ್ ಡಾ. ಎಂ .ಮೋಹನ್ ಆಳ್ವ, ನಿಟ್ಟೆ ವಿಶ್ವ ವಿದ್ಯಾನಿಲಯದ ಸಹಕುಲಪತಿ ಎನ್ .ವಿಶಾಲ್ ಹೆಗ್ಡೆ, ಸೇವಾಂಜಲಿ ಪ್ರತಿಷ್ಠಾನದ ಕೃಷ್ಣಕುಮಾರ್ ಪೂಂಜ,ಸೇರಿದಂತೆ ಅನೇಕರು ಉಪಸ್ಥಿತರಿದ್ದರು.