ಪುತ್ತೂರು: ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 14ನೇ ಬಾರಿ ಅತ್ಯುತ್ತಮ ಸಹಕಾರ ಸಂಘ ಪ್ರಶಸ್ತಿಯನ್ನು ಎಸ್ ಸಿಡಿಸಿಸಿ ಬ್ಯಾಂಕ್ ನೀಡಿ, ಗೌರವಿಸಿದೆ. ಆ.30ರಂದು ಮಂಗಳೂರಿನಲ್ಲಿ ಎಸ್ ಸಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ| ಎಂ.ಎನ್ ರಾಜೇಂದ್ರ ಕುಮಾರ್ ರವರು ಸಂಘದ ಅಧ್ಯಕ್ಷ ತಾರಾನಾಥ ಕಾಯರ್ಗ, ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಚಂದ್ರಶೇಖರ್ ಅವರಿಗೆ ಪ್ರಶಸ್ತಿ ನೀಡಿ ಗೌರವಿಸಿದರು. ಎಸ್ ಸಿಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಎನ್.ಮನ್ಮಥ, ಎಸ್.ಬಿ.ಜಯರಾಮ ರೈ, ಸಹಕಾರ ಸಂಘಗಳ ಉಪನಿಬಂಧಕ ರಮೇಶ್, ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನಿರ್ದೇಶಕರುಗಳಾದ ಉದಯ ರೈ ಮಾದೋಡಿ, ಪ್ರಕಾಶ್ ರೈ ಸಾರಕರೆ, ಅಶ್ವಿನ್ ಎಲ್ ಶೆಟ್ಟಿ, ಗಂಗಾಧರ ಪೆರಿಯಡ್ಕ ಉಪಸ್ಥಿತರಿದ್ದರು.
Home ಇತ್ತೀಚಿನ ಸುದ್ದಿಗಳು ಸವಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ 14ನೇ ಬಾರಿ ಎಸ್ ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ