ಪುತ್ತೂರು: ಪುತ್ತೂರು ಮಹಿಳಾ ವಿವಿಧೋದ್ದೇಶ ಸಹಕಾರ ಸಂಘ ದಕ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕಿನಿಂದ 2024-25ನೇ ಸಾಲಿಗೆ ಸಂಸ್ಥೆಯು ಸಾಧಿಸಿದ ಸರ್ವತೋಮುಖ ಅಭಿವೃದ್ಧಿಗಾಗಿ 6ನೇ ಬಾರಿಗೆ ಸಾಧನಾ ಪ್ರಶಸ್ತಿ ಪುರಸ್ಕೃತಗೊಂಡಿದೆ.
ಆ.30ರಂದು ಮಂಗಳೂರಿನಲ್ಲಿ ನಡೆದ ಎಸ್‌ಸಿಡಿಸಿಸಿ ಬ್ಯಾಂಕ್‌ನ 2024-25ನೇ ಸಾಲಿನ ಮಹಾಸಭೆಯಲ್ಲಿ ಅಧ್ಯಕ್ಷ ಡಾ. ಎಂ.ಎನ್.ರಾಜೇಂದ್ರ ಕುಮಾರ್, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ ಬಳಜ್ಜ ಅವರು ಮಹಿಳಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷೆ ಗೌರಿ ಹೆಚ್, ಪ್ರಭಾರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿದ್ಯಾ ಎಸ್ ಅವರಿಗೆ ಶಾಲು ಹೊದಿಸಿ ಗೌರವಿಸಿದರು.
ಈ ಸಂದರ್ಭ ಉಪಾಧ್ಯಕ್ಷೆ ಇಂದಿರಾ ಬಿ ಕೆ, ಸಂಘದ ನಿರ್ದೇಶಕರಾದ ಹಾಗೂ ಕಾಣಿಯೂರು ಸಲಹಾ ಸಮಿತಿ ಅಧ್ಯಕ್ಷೆ ಪುಪ್ಷಾವತಿ ಕಳುವಾಜೆ ಉಪಸ್ಥಿತರಿದ್ದರು.