ವಿಟ್ಲ: ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘಕ್ಕೆ 2024-25ನೇ ಸಾಲಿನ 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಸಂಘದ ಮಹಾಸಭೆಯಲ್ಲಿ ಪ್ರದಾನ ಮಾಡಲಾಯಿತು.
ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಅಧ್ಯಕ್ಷರಾದ ಪದ್ಮನಾಭ ಭಟ್ ಬಿ. ಪೆರ್ನಾಜೆ ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಕೇಶವ ಗೌಡ ಕಾಂತುಕೋಡಿ ರವರಿಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷರಾದ ಸಹಕಾರಿ ರತ್ನ ಎಂ.ಎನ್. ರಾಜೇಂದ್ರ ಕುಮಾರ್ ಅವರು ಮಂಗಳೂರಿನಲ್ಲಿ ನಡೆದ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಸನ್ಮಾನಿಸಿದರು. 2024-25ರ ಆರ್ಥಿಕ ವರ್ಷದಲ್ಲಿ ಕೆದಿಲ ವ್ಯವಸಾಯ ಸೇವಾ ಸಹಕಾರಿ ಸಂಘದ ಸದಸ್ಯರು 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ಈ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಸತತ 11 ವರ್ಷಗಳಿಂದ 100% ಸಾಲ ಮರುಪಾವತಿ ಮಾಡಿದ ಸಾಧನೆಗಾಗಿ ಪ್ರಶಸ್ತಿ ಲಭಿಸುತ್ತಿದೆ. ಸಂಘವು ಆಡಿಟ್ ವರ್ಗೀಕರಣದಲ್ಲಿ 20 ವರ್ಷಗಳಿಂದ ಸತತವಾಗಿ “ಎ” ಶ್ರೇಣಿಯಲ್ಲಿದೆ.
ಈ ಸಂದರ್ಭದಲ್ಲಿ ಬ್ಯಾಂಕ್ ನ ಉಪಾಧ್ಯಕ್ಷರಾದ ವಿನಯಕುಮಾರ್ ಸೂರಿಂಜೆ, ನಿರ್ದೇಶಕರುಗಳಾದ ಟಿ.ಜಿ. ರಾಜಾರಾಮ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್ ಬಿ ಜಯರಾಮ ರೈ ಮೊದಲಾದವರು ಉಪಸ್ಥಿತರಿದ್ದರು.