ಪುತ್ತೂರು: ಶಿವರಾಮಕಾರಂತ ಪ್ರೌಢ ಶಾಲೆ ಪುತ್ತೂರು ಇಲ್ಲಿ ನಡೆದ 2025-26ನೇ ಸಾಲಿನ ಶೈಕ್ಷಣಿಕ ವರ್ಷದ ವಲಯ ಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗ ವಾಲಿಬಾಲ್ ಪಂದ್ಯಾಟದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢ ಶಾಲೆಯ ತಂಡವು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾಲಾ ಮುಖ್ಯ ಶಿಕ್ಷಕಿ ರೋಸಲಿನ್ ಪ್ಲೇವಿ ಲೋಬೊರವರ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಕಿ ಶ್ರೀಮತಿ ದೀಕ್ಷಾ ಪಿ ಎನ್ ರವರು ವಿದ್ಯಾರ್ಥಿನಿಯರಿಗೆ ತರಬೇತಿ ನೀಡಿರುತ್ತಾರೆ.