ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನಲ್ಲಿ ವಿಶೇಷ ಸಾಧನ ಪ್ರಶಸ್ತಿಯನ್ನು ಪುತ್ತೂರು ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘಕ್ಕೆ ಪ್ರದಾನ ಮಾಡಲಾಗಿದೆ.
ಆ.30ರಂದು ಮಂಗಳೂರಿನಲ್ಲಿ ನಡೆದ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2024-25 ನೇ ಸಾಲಿನ ಮಹಾಸಭೆಯಲ್ಲಿ ಈ ಪ್ರಶಸ್ತಿಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಅಧ್ಯಕ್ಷ ಡ ಎಂ.ಎನ್ ರಾಜೇಂದ್ರ ಕುಮಾರ್ ಅವರು ಪ್ರದಾನ ಮಾಡಿದರು. ಒಕ್ಕಲಿಗ ಸಮುದಾಯ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಚಿದಾನಂದ ಬೈಲಾಡಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಧಾಕರ್ ಕೆ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭ ಸಂಘದ ನಿರ್ದೇಶಕರು ಉಪಸ್ಥಿತರಿದ್ದರು.