ಪುತ್ತೂರು: ಕರ್ನಾಟಕ ಪಬ್ಲಿಕ್ ಸ್ಕೂಲ್ ಕೆಯ್ಯೂರು ಇದರ ಹಳೆ ವಿದ್ಯಾರ್ಥಿ ಸಂಘದ ಆಶ್ರಯದಲ್ಲಿ ಸಂಸ್ಥೆಯ ಪದವಿಪೂರ್ವ ಕಾಲೇಜು ವಿಭಾಗದ ವಿದ್ಯಾರ್ಥಿಗಳಿಗಾಗಿ ಸ್ಪೋಕನ್ ಇಂಗ್ಲಿಷ್ ತರಗತಿಗಳ ಉದ್ಘಾಟನಾ ಸಮಾರಂಭ ಜರಗಿತು.
ಕೆಯ್ಯೂರು ಗ್ರಾಮ ಪಂಚಾಯತ್ ಅಧ್ಯಕ್ಷ ಶರತ್ ಕುಮಾರ್ ಕೆ. ದೀಪ ಬೆಳಗಿಸಿ ಉದ್ಘಾಟಿಸಿದರು. ಎಸ್.ಡಿ.ಎಂ.ಸಿ. ಕಾರ್ಯಾಧ್ಯಕ್ಷ ಎ. ಕೆ. ಜಯರಾಮ ರೈ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಭಾಗ್ಯೇಶ್ ರೈ, ಸಂಪನ್ಮೂಲ ವ್ಯಕ್ತಿ ವೇಣುಗೋಪಾಲ್, ಪ್ರಿನ್ಸಿಪಾಲ್ ಹಸೀನಾ ಬಾನು ಎಸ್. ಇ., ವೈಸ್ ಪ್ರಿನ್ಸಿಪಾಲ್ ವಿನೋದ್ ಕುಮಾರ್ ಕೆ. ಎಸ್., ಮುಖ್ಯ ಶಿಕ್ಷಕ ಬಾಬು ಎಂ., ಹಳೆ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಎಸ್.ಡಿ.ಎಂ.ಸಿ. ಪದಾಧಿಕಾರಿಗಳು ಉಪಸ್ಥಿತರಿದ್ದರು.