ಪುತ್ತೂರು:ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಕುಸಿದು ಬಿದ್ದು ಮೃತಪಟ್ಟ ಘಟನೆ ಕೋಡಿಂಬಾಡಿಯಲ್ಲಿ ನಡೆದ ಬಗ್ಗೆ ವರದಿಯಾಗಿದೆ. ಬೆಳ್ಳಿಪ್ಪಾಡಿ ಗ್ರಾಮದ ಅರ್ಬಿ ನಿವಾಸಿ ರವಿ ಶೆಟ್ಟಿ ಮೃತಪಟ್ಟವರು.
ಆ.29ರಂದು ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ರಾಜೇಶ್ ಶೆಟ್ಟಿಯವರ ಮನೆಗೆ ಕೂಲಿ ಕೆಲಸಕ್ಕೆ ಹೋಗಿದ್ದ ವೇಳೆ ಅಲ್ಲಿ ತೋಟದಲ್ಲಿ ಕೆಲಸ ಮಾಡುವಾಗ ಕುಸಿದು ಬಿದ್ದು ಅಸ್ವಸ್ಥಗೊಂಡಿದ್ದರು.ತಕ್ಷಣ ಅವರನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ಆಗಲೇ ರವಿ ಶೆಟ್ಟಿಯವರು ಮೃತಪಟ್ಟಿದ್ದರು. ಮೃತರ ಸಹೋದರ ಗಿರೀಶ್ ಅವರು ನೀಡಿದ ದೂರಿನಂತೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.