ಪುತ್ತೂರು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವಠಾರದಲ್ಲಿ ನಡೆಯುವ ಸಾರ್ವಜನಿಕ ಶ್ರೀ ಗಣೇಶೋತ್ಸವ ಕಾರ್ಯಕ್ರಮಕ್ಕೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಆ.30ರಂದು ಭೇಟಿ ನೀಡಿದ್ದರು.
ಈ ಸಂದರ್ಭ ಅರ್ಚಕರು ಶಾಸಕರಿಗೆ ಪ್ರಸಾದ ವಿತರಿಸಿದರು. ಸಮಿತಿ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು ಅವರು ಶಾಸಕರಿಗೆ ಶಾಲು ಹೊದೆಸಿ ಗೌರವಿಸಿದರು. ಈ ತಾ.ಪಂ ಮಾಜಿ ಅಧ್ಯಕ್ಷ ರಾಧಾಕೃಷ್ಣ ಬೋರ್ಕರ್, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಿಕಟಪೂರ್ವ ಸದಸ್ಯ ರಾಮಚಂದ್ರ ಕಾಮತ್ ಸಹಿತ ಹಲವಾರು ಮಂದಿ ಉಪಸ್ಥಿತರಿದ್ದರು .