ಉಪ್ಪಿನಂಗಡಿ: ಇಲ್ಲಿನ ಅರ್ತಿಲ ನಿವಾಸಿ, ಟೈಲರ್ ಹೊನ್ನಪ್ಪ ಪೂಜಾರಿ (56) ನೇಣು ಬಿಗಿದು ಆತ್ಮಹತ್ಯೆಗೈದ ಘಟನೆ ಶನಿವಾರದಂದು ನಡೆದಿದೆ.
ಉಪ್ಪಿನಂಗಡಿ ಪೇಟೆಯಲ್ಲಿ ಟೈಲರ್ ವೃತ್ತಿಯನ್ನು ಮಾಡಿಕೊಂಡಿದ್ದ ಇವರು, ಅನಾರೋಗ್ಯದಿಂದ ಬಳಲುತ್ತಿದ್ದು, ಇದರಿಂದಾಗಿ ಜೀವನದಲ್ಲಿ ಜಿಗುಪ್ಸೆ ಹೊಂದಿ ಮನೆಯ ದೇವರ ಕೋಣೆಯಲ್ಲಿ ನೇಣು ಬಿಗಿದು ಆತ್ಮಹತ್ಯೆಗೈದಿರುತ್ತಾರೆಂದು ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಲಾಗಿದೆ. ಮೃತರು ಪತ್ನಿ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.