ಪುತ್ತೂರು; ಎಪಿಎಂಸಿ ಆದರ್ಶ ಆಸ್ಪತ್ರೆ ಬಳಿಯ ಜೆಎಂಜೆ ಕಾಂಪ್ಲೆಕ್ಸ್ ನ ಪ್ರಥಮ ಮಹಡಿಯಲ್ಲಿ ಕಾರ್ಯಾಚರಿಸುತ್ತಿರುವ ಆಭ್ಯುದಯ ಸೌಹಾರ್ದ ಕೋ-ಆಪರೇಟಿವ್ ಸೊಸೈಟಿಯ ದ್ವಿತೀಯ ವಾರ್ಷಿಕ ಮಹಾಸಭೆಯು ಸೆ.13ರಂದು ಸೊಸೈಟಿಯ ಆವರಣದಲ್ಲಿ ಸಂಘದ ಅಧ್ಯಕ್ಷರಾದ ಲಿಯೋ ಡಿ’ಸೋಜರವರ ಅಧ್ಯಕ್ಷತೆಯಲ್ಲಿ ನಡೆಯಲಿರುವುದು. ಸಂಘದ ಸದಸ್ಯರು ಸಭೆಗೆ ಹಾಜರಾಗಿ ಸಭೆಯನ್ನು ಯಶಸ್ವಿಗೊಳಿಸಬೇಕಾಗಿ ಸಂಘದ ಉಪಾಧ್ಯಕ್ಷ ಕೃಷ್ಣವೇಣಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಿಕ್ಟರ್ ಶರೋನ್ ಡಿಸೋಜರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.