ಬಡಗನ್ನುರು: ಪಟ್ಟೆ ಇಲ್ಲಿನ ದ್ವಾರಕಾ ಪ್ರತಿಷ್ಠಾನ (ರಿ.), ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀ ಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ಶಿಕ್ಷಕರ ದಿನಾಚರಣೆ ಹಾಗೂ “ಸಾಂದೀಪನಿ ಗುರು” ಪ್ರಶಸ್ತಿ ಪ್ರದಾನ ಸಮಾರಂಭ ಸೆ.5ರಂದು ಅಪರಾಹ್ನ ಗಂ.3 ಕ್ಕೆ ಶ್ರೀಕೃಷ್ಣ ಹಿ.ಪ್ರಾ. ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಸಮಾರಂಭವು ಪುತ್ತೂರು ದ್ವಾರಕಾ ಪ್ರತಿಷ್ಠಾನ (ರಿ.), ನ ಅಧ್ಯಕ್ಷ ಗೋಪಾಲಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ.
ಪುತ್ತೂರು ದ್ವಾರಕಾ ಪ್ರತಿಷ್ಠಾನದ ಕಾರ್ಯದರ್ಶಿ ಗಣರಾಜ ಕುಂಬ್ಳೆ ಅಭಿನಂದನಾ ಭಾಷಣ ಮಾಡಲಿದ್ದಾರೆ. ಕಳತ್ತಜೆ ನಿವೃತ್ತ ಶಿಕ್ಷಕ ಕೆ. ಜಯರಾಜ ಆಚಾರ್, ರವರಿಗೆ ಸಾಂದೀಪನಿ ಗುರು” ಪ್ರಶಸ್ತಿ ಪ್ರದಾನ ನಡೆಯಲಿದೆ. ಉಪಸ್ಥಿತರಾಗಿ ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಶ್ವೇಶ್ ಹಿರಣ್ಯ, ಪ್ರತಿಭಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸುಮನಾ ಬಿ. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಎನ್. ಭಾಗವಹಿಸಲಿದ್ದಾರೆ.