ದಸರಾ ಯೋಗಾಸನ: ವರ್ಷಾ ವೀರಮಂಗಲ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಪುತ್ತೂರು ತಾಲೂಕು ದಸರಾ ಕ್ರೀಡಾಕೂಟ 2025-26 ನೇ ಸಾಲಿನ ಯೋಗಾಸನ ಸ್ಪರ್ಧೆಯಲ್ಲಿ ಪಿಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ವೀರಮಂಗಲ ಇಲ್ಲಿನ 6ನೇ ತರಗತಿ ವಿದ್ಯಾರ್ಥಿನಿ ವರ್ಷಾ ವೀರಮಂಗಲ ಇವರು traditional single , Artistic single ಹಾಗೂ Artistic pair ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಈಕೆ 2023- 24 ನೇ ಸಾಲಿನಲ್ಲಿ ರಾಷ್ಟ್ರ ಮಟ್ಟದ ಯೋಗ ಕಲಾಸಿರಿ ಪ್ರಶಸ್ತಿ ಪಡೆದುಕೊಂಡಿದ್ದು, ಜಿಲ್ಲಾ ಮಟ್ಟ ಹಾಗೂ ರಾಜ್ಯ ಮಟ್ಟದ ಪ್ರಶಸ್ತಿಗಳನ್ನು ತನ್ನದಾಗಿಸಿಕೊಂಡಿದ್ದಾರೆ. ಇವರು ಬಡಗನ್ನೂರು ಗ್ರಾಮ ಪಂಚಾಯತ್ ಸಿಬ್ಬಂದಿ ಶಾರದಾ.ಕೆ ಹಾಗೂ ಹರೀಶ್ ವೀರಮಂಗಲ ಇವರ ಪುತ್ರಿ.

LEAVE A REPLY

Please enter your comment!
Please enter your name here