ಬಡಗನ್ನೂರು: ಶಾಲಾ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣ ಅಧಿಕಾರಿಗಳ ಕಛೇರಿ ಪುತ್ತೂರು ತಾಲ್ಲೂಕು, ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳು, ಪಟ್ಟೆ ಇದರ ಜಂಟಿ ಆಶ್ರಯದಲ್ಲಿ ತಾಲೂಕು ಮಟ್ಟದ 17ರ ವಯೋಮಾನದ (ಪ್ರೌಢಶಾಲಾ ವಿಭಾಗ) ಬಾಲಕ ಹಾಗೂ ಬಾಲಕಿಯರ ವಾಲಿಬಾಲ್ ಪಂದ್ಯಾಟ-2025-26 ಸೆ. 4 ರಂದು ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಕ್ರೀಡಾಂಗಣದಲ್ಲಿ ನಡೆಯಲಿದೆ.
ಸಭಾ ಕಾರ್ಯಕ್ರಮವು ಪಟ್ಟೆ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷ ಗೋಪಾಲಕೃಷ್ಣ ಭಟ್ ರವರ ಅಧ್ಯಕ್ಷತೆಯಲ್ಲಿ ನಡೆಯಲಿದೆ. ಬಡಗನ್ನೂರು ಪಂಚಾಯತ್ ಅಧ್ಯಕ್ಷೆ ಪುಷ್ಪಲತಾ ಎಂ ಕಾರ್ಯಕ್ರಮವನ್ನು ಉದ್ಘಾಟನೆ ಮಾಡಲಿದ್ದಾರೆ. ಅಭ್ಯಾಗತರಾಗಿ ಪುತ್ತೂರು ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾ ಅಧಿಕಾರಿ ಚಕ್ರಪಾಣಿ,ಕುಂಬ್ರ ಕೆ.ಪಿ.ಎಸ್ ದೈಹಿಕ ಶಿಕ್ಷಕರು ಹಾಗೂ ನೋಡೆಲ್ ಅಧಿಕಾರಿಗಳು ಆದ ಕೃಷ್ಣಪ್ರಸಾದ್ ಕಾಣಿಯೂರು ಜಿ.ಎಸ್.ಪಿ.ಎಸ್.ದೈಹಿಕ ಶಿಕ್ಷಕರು ಹಾಗೂ ನೋಡೆಲ್ ಅಧಿಕಾರಿಗಳು ಬಾಲಕೃಷ್ಣ, ಕುಂಬ್ರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಿ ಆರ್ ಪಿ ಶಶಿಕಲಾ ಭಾಗವಹಿಸಲಿದ್ದಾರೆ.
ಗೌರವ ಉಪಸ್ಥಿತರಾಗಿ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಸಂಚಾಲಕ ವಿಶ್ವೇಶ್ ಹಿರಣ್ಯ, ಪ್ರತಿಭಾ ಪ್ರೌಢ ಶಾಲಾ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ಲಿಂಗಪ್ಪ ಗೌಡ ಮೂಡಿಕೆ ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಎಸ್. ಡಿ. ಯಂ. ಸಿ ಅಧ್ಯಕ್ಷ ಕೇಶವಪ್ರಸಾದ್ ನೀಲಗಿರಿ, ಪಟ್ಟೆ ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಕೊಪ್ಪಳ, ಪ್ರತಿಭಾ ಪ್ರೌಢ ಶಾಲಾ ಮುಖ್ಯ ಶಿಕ್ಷಕಿ ಸುಮನಾ ಬಿ., ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕ ರಾಜಗೋಪಾಲ ಎನ್. ವಿದ್ಯಾ ಸಂಸ್ಥೆಗಳ ದೖೆಹಿಕ ಶಿಕ್ಷಣ ಶಿಕ್ಷಕ ಮೋನಪ್ಪ ಎಂ ಭಾಗವಹಿಸಲಿದ್ದಾರೆ.