ಗಮಕ ವಾಚನ ಸ್ಪರ್ಧೆ: ಜಿಡೆಕಲ್ಲು ಪ್ರಥಮ ದರ್ಜೆ ಕಾಲೇಜಿಗೆ ಪ್ರಶಸ್ತಿ

0

ಪುತ್ತೂರು: ಕರ್ನಾಟಕ ಗಮಕ ಕಲಾ ಪರಿಷತ್ತು, ಬೆಂಗಳೂರು, ದ.ಕ ಜಿಲ್ಲೆ, ಪುತ್ತೂರು ಘಟಕ ಮತ್ತು ವಿವೇಕಾನಂದ ಕನ್ನಡ ಮಾಧ್ಯಮ ಶಾಲಾ ಸಹಯೋಗದಲ್ಲಿ ಜಿಲ್ಲಾ ಗಮಕ ಕಲಾ ಸಮ್ಮೇಳನದ ಅಂಗವಾಗಿ ‘ಗಮಕ ವಾಚನ’ ಸ್ಪರ್ಧೆ ನಡೆಯಿತು.

ಪುತ್ತೂರಿನ ಜಿಡೆಕಲ್ಲು ಸರಕಾರಿ ಪ್ರಥಮ ದರ್ಜೆ ಕಾಲೇಜು ಇದರ ಪ್ರಥಮ ವಾಣಿಜ್ಯ ಪದವಿಯ ವಿದ್ಯಾರ್ಥಿನಿಯರಾದ ಮೇಘನಾ ಎನ್.ಎಸ್ ಮತ್ತು ರಶ್ಮಿ ವೈ. ಎಸ್ ವಿಜೇತರಾಗಿದ್ದು ಜಿಲ್ಲಾಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಸ್ಪರ್ಧೆಯಲ್ಲಿ ವಿಜೇತರಾದ ಮೇಘನಾ ಮತ್ತು ರಶ್ಮಿ ಇವರನ್ನು ಕಾಲೇಜಿನ ಪ್ರಾಂಶುಪಾಲರಾದ ಸುಬ್ಬಪ್ಪ ಕೈಕಂಬ ಮತ್ತು ಸಾಂಸ್ಕೃತಿಕ ಸಂಘದ ಸಂಚಾಲಕರಾದ ಪುಷ್ಪರಾಜ್ ಅಭಿನಂದಿಸಿದ್ದಾರೆ.

LEAVE A REPLY

Please enter your comment!
Please enter your name here