ಕಾಣಿಯೂರು : ದ ಕ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಕಡಬ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘ ಕಡಬ, ತಾಲೂಕು ಯುವಜನ ಒಕ್ಕೂಟ ಕಡಬ, ರಾಜ್ಯಪ್ರಶಸ್ತಿ ಪುರಸ್ಕೃತ ಸವಣೂರು ಯುವಕ ಮಂಡಲ ಸವಣೂರು, ಸಂತ ಫಿಲೋಮಿನಾ ಕಾಲೇಜ್ ಪುತ್ತೂರು ಮತ್ತು ಸರಕಾರಿ ಪದವಿ ಪೂರ್ವ ಕಾಲೇಜು ಸವಣೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡೆದ ಕಡಬ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಾಣಿಯೂರು ಪ್ರಗತಿ ವಿದ್ಯಾಸಂಸ್ಥೆಯ ಕನ್ನಡ ಮಾಧ್ಯಮದ ಹತ್ತನೇ ತರಗತಿ ವಿದ್ಯಾರ್ಥಿ ಪ್ರೇಕ್ಷಕ್ 5000 ಮೀಟರ್ ಓಟದಲ್ಲಿ ಪ್ರಥಮ ಸ್ಥಾನ ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಇವರಿಗೆ ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕ ಸಂತೋಷ್ ತರಬೇತು ನೀಡಿರುತ್ತಾರೆ.