ಸಂಪ್ಯ ನವಚೇತನ ಯುವಕ ಮಂಡಲದ 43ನೇ ವರ್ಷದ ಗಣೇಶೋತ್ಸವ ಶೋಭಾಯತ್ರೆ

0

ಪುತ್ತೂರು:ಸಂಪ್ಯ ಶ್ರೀರಾಮ ನಗರದ ನವಚೇತನಾ ಯುವಕ ಮಂಡಲದ ವತಿಯಿಂದ ಎರಡು ದಿನಗಳ ಕಾಲ ಸಂಪ್ಯ ಶ್ರೀ ಮಹಾವಿಷ್ಣುಮೂರ್ತಿ ದೇವಸ್ಥಾನದಲ್ಲಿ ವಿವಿಧ ಧಾರ್ಮಿಕ, ಆಟೋಟ ಸ್ಪರ್ಧೆಗಳು ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಸಂಭ್ರಮಿಸಿದ ೪೩ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವವು ಆ.28ರಂದು ಶ್ರೀಗಣೇಶನ ವಿಗ್ರಹದ ಶೋಭಾಯಾತ್ರೆ, ಜಲಸ್ಥಂಬನದೊಂದಿಗೆ ಸಂಪನ್ನಗೊಂಡಿತು.


ವೇ.ಮೂ ಸಂದೀಪ ಕಾರಂತ ಕಾರ್ಪಾಡಿಯವರ ನೇತೃತ್ವದಲ್ಲಿ ನಡೆಯಲಿರುವ ಗಣೇಶೋತ್ಸವದಲ್ಲಿ ಆ.೨೭ರಂದು ಬೆಳಿಗ್ಗೆ ಗಣಪತಿ ವಿಗ್ರಹ ಪ್ರತಿಷ್ಠೆ, ಗಣಹೋಮ ಕಾರ್ಯಕ್ರಮಗಳಿಗೆ ಚಾಳನೆ ದೊರೆಯಿತು. ನಂತರ ವಿವಿಧ ಸ್ಪರ್ಧೆಗಳು, ಮಧ್ಯಾಹ್ನ ಧಾರ್ಮಿಕ ಸಭೆ ನಂತರ ಮಹಾಪೂಜೆ ಪ್ರಸಾದ ವಿತರಣೆ ಹಾಗೂ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಗಳು ನಡೆದ ಬಳಿಕ ಅನ್ನಸಂತರ್ಪಣೆ ನೆರವೇರಿತು.


ಆ.೨೮ರಂದು ಬೆಳಿಗ್ಗೆ ಗಣಪತಿಹೋಮ, ಸತ್ಯನಾರಾಯಣ ಪೂಜೆ, ಕುಣಿತ ಭಜನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆದ ಬಳಿಕ ಶ್ರೀ ದೇವರ ವೈಭವದ ಶೋಭಾಯಾತ್ರೆಗೆ ಚಾಲನೆ ನೀಡಲಾಯಿತು. ದೇವಸ್ಥಾನದ ಬಳಿಯಿಂದ ಹೊರಟ ಶೋಭಾಯಾತ್ರೆಯು ಮುಖ್ಯ ರಸ್ತೆಯಾಗಿ ಮುಕ್ರಂಪಾಡಿ, ಮೊಟ್ಟೆತ್ತಡ್ಕ ತನಕ ತೆರಳಿ ನಂತರ ಸಂಪ್ಯ ದೇವಸ್ಥಾನಕ್ಕೆ ಹಿಂತಿರುಗಿ ದೇವಸ್ಥಾನದ ಬಳಿಯ ಕೆರೆಯಲ್ಲಿ ವಿಗ್ರಹ ಜಲಸ್ಥಂಬನದೊಂದಿಗೆ ಗಣೇಶೋತ್ಸವವು ಸಂಪನ್ನಗೊಂಡಿತು. ಶ್ರೀನಾಗ ಪಂಚಶ್ರೀ ಭಜನಾ ಮಂಡಳಿ ವಿದ್ಯಾಪುರ ಕಬಕ ಇವರಿಂದ ಕುಣಿತ ಭಜನೆ, ಚೆಂಡೆ, ಸ್ಥಬ್ದ ಚಿತ್ರಗಳು ಶೋಭಾಯಾತ್ರೆಯಲ್ಲಿ ಮೆರುಗು ನೀಡಿತ್ತು.


ಎರಡು ದಿನಗಳ ಕಾಲ ನಡೆದ ಗಣೇಶೋತ್ಸವದಲ್ಲಿ ಸಾಮಾಜಿಕ, ಧಾರ್ಮಿಕ, ರಾಜಕೀಯ ಮುಖಂಡರು, ದೇವಸ್ಥಾನದ ವ್ಯವಸ್ಥಾಪನಾ ಸಮಿತಿ, ಆರೋಗ್ಯ ರಕ್ಷಾ ಸಮಿತಿ, ನವಚೇತನ ಯುವಕ ಮಂಡಲದ ಪದಾಧಿಕಾರಿಗಳು ಸೇರಿದಂತೆ ಸಾವಿರಾರು ಮಂದಿ ಭಕ್ತಾದಿಗಳು ಭಾಗವಹಿಸಿದ್ದರು.

LEAVE A REPLY

Please enter your comment!
Please enter your name here