
ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮತ್ತು ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮೇಲಿನ ಅವಹೇಳನ ಖಂಡಿಸಿ ಶ್ರೀ ಧರ್ಮಸ್ಥಳ ಧರ್ಮ ಸಂರಕ್ಷಣಾ ವೇದಿಕೆ ಪುತ್ತೂರು ತಾಲೂಕು ವತಿಯಿಂದ ಜನಾಗ್ರಹ ಸಭೆಯು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ದೇವರ ಗದ್ದೆಯಲ್ಲಿ ಸೆ.1 ರಂದು ಜರಗಿತು.
ಗುರುಪುರ ವಜ್ರದೇಹಿ ಮಠದ ಶ್ರೀ ರಾಜಶೇಖರಾನಂದ ಸ್ವಾಮೀಜಿ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್, ಧರ್ಮಸ್ಥಳದ ವಕೀಲ ಕೇಶವ ಗೌಡ, ಪುತ್ತೂರಿನ ಶಾಸಕ ಅಶೋಕ್ ಕುಮಾರ್ ರೈ, ಮಾಜಿ ಶಾಸಕ ಸಂಜೀವ ಮಠಂದೂರು, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ಸಮಾವೇಶ ಉದ್ದೇಶಿಸಿದ ಮಾತನಾಡಿದರು.
ಜನಾಗ್ರಹ ಸಭೆಯ ಸಂಚಾಲಕ ಶಶಿಕುಮಾರ್ ರೈ ಬಾಲ್ಯೊಟ್ಟು ಪ್ರಸ್ತಾವನೆಗೈದು ಸ್ವಾಗತಿಸಿದರು. ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆಯ ಮಾಜಿ ಅಧ್ಯಕ್ಷ ಮಹಾಬಲ ರೈ ವಳತ್ತಡ್ಕ ವಂದಿಸಿದರು.
ಡಾ. ಎಂ.ಕೆ. ಪ್ರಸಾದ್, ಸ್ವರ್ಣೋದ್ಯಮಿ ಬಲರಾಮ ಆಚಾರ್ಯ ಸೇರಿದಂತೆ ಹಲವು ಕ್ಷೇತ್ರಗಳ ಗಣ್ಯರು, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಭಜನಾ ಪರಿಷತ್‌ನ ಸದಸ್ಯರು ಸೇರಿದಂತೆ ಸಾವಿರಾರು ಭಕ್ತಾಭಿಮಾನಿಗಳು ಸಮಾವೇಶದಲ್ಲಿ ಪಾಲ್ಗೊಂಡರು.
ವೇದಿಕೆಯಲ್ಲಿ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ, ಮಾಜಿ ಅಧ್ಯಕ್ಷ ಸಾಜ ರಾಧಾಕೃಷ್ಣ ಆಳ್ವ, ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪಕ್ಕಳ, ಪುತ್ತೂರು ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಗೌರವಾಧ್ಯಕ್ಷ ರವೀಂದ್ರ ಶೆಟ್ಟಿ ನುಳಿಯಾಲು, ವಿಶ್ವಹಿಂದು ಪರಿಷದ್ ಅಧ್ಯಕ್ಷ ಯು.ಪೂವಪ್ಪ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೃಷ್ಣಪ್ರಸಾದ್ ಆಳ್ವ, ಪುತ್ತೂರು ನಗರ ಬಿಜೆಪಿ ಮಂಡಲ ಅಧ್ಯಕ್ಷ ಶಿವಕುಮಾರ್ ಪಿ.ಬಿ., ಚಂದ್ರಶೇಖರ ರಾವ್ ಬಪ್ಪಳಿಗೆ, ಕಾವು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ನನ್ಯ ಅಚ್ಚುತ ಮೂಡೆತ್ತಾಯ, ಪ್ರಮುಖರಾದ ಬೂಡಿಯಾರ್ ರಾಧಾಕೃಷ್ಣ ರೈ, ಯು. ಲೋಕೇಶ್ ಹೆಗ್ಡೆ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಚನಿಲ ತಿಮ್ಮಪ್ಪ ಶೆಟ್ಟಿ, ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದ ಅಧ್ಯಕ್ಷ ರಾಧಾಕೃಷ್ಣ ನೈಕ್, ಪುಣಚ ಮಹಿಷಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ಮಾರಪ್ಪ ಶೆಟ್ಟಿ ಬೈಲುಗುತ್ತು, ರಣಮಂಗಲ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಆಡಳಿತ ಮೊಕ್ತೇಸರ ಶ್ರೀಕೃಷ್ಣ ಬೋಳಿಲ್ಲಾಯ ಕಡಮ್ಮಾಜೆ, ಇರ್ದೆ ಶ್ರೀ ವಿಷ್ಣುಮೂರ್ತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ವಿಠಲ ರೈ ಬಾಲ್ಯೊಟ್ಟುಗುತ್ತು, ಮಹಾವೀರ ಆಸ್ಪತ್ರೆಯ ಅಶೋಕ್ ಪಡಿವಾಳ್, ಗೌರಿ ಬನ್ನೂರು, ಸುಭಾಸ್ ರೈ ಬೆಳ್ಳಿಪ್ಪಾಡಿ, ವಕೀಲರಾದ ನಿರ್ಮಲ್ ಕುಮಾರ್ ಜೈನ್, ಮುರಳೀಕೃಷ್ಣ ಹಸಂತಡ್ಕ, ಕೆಯ್ಯೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅಧ್ಯಕ್ಷ ಎ.ಕೆ. ಜಯರಾಮ ರೈ, ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಟ್ರಸ್ಟಿಗಳಾದ ವಿಜಯ ಸುವರ್ಣ, ಕೃಷ್ಣವೇಣಿ, ವಕೀಲರಾದ ಅಶ್ವಿನ್, ನಗರಸಭೆಯ ಮಾಜಿ ಅಧ್ಯಕ್ಷ ಜಗದೀಶ್ ಶೆಟ್ಟಿ ನೆಲ್ಲಿಕಟ್ಟೆ, ಆರ್.ಸಿ. ನಾರಾಯಣ ರೆಂಜ, ನಗರಸಭಾ ಅಧ್ಯಕ್ಷೆ ಲೀಲಾವತಿ ಅಣ್ಣು ನಾಯ್ಕ್, ಪ್ರಗತಿಪರ ಕೃಷಿಕ ವಾಸು ಪೂಜಾರಿ ಗುಂಡ್ಯಡ್ಕ, ನವೀನ್ ನೈಕ್ ಬೆದ್ರಾಳ, ಅಜಿತ್ ಕುಮಾರ್ ಜೈನ್, ನರೇಂದ್ರ ಪಡಿವಾಳ್, ವಿ.ಕೆ. ಜೈನ್, ರಾಮ ಭಟ್ ಬಂಗಾರಡ್ಕ, ಶಿವನಾಥ ರೈ ಮೇಗಿನಗುತ್ತು, ಉದಯ ಕುಮಾರ್, ಸೀತಾರಾಮ ರೈ ಕೆದಂಬಾಡಿಗುತ್ತು, ಚಂದ್ರಹಾಸ ಶೆಟ್ಟಿ ಉಪಸ್ಥಿತರಿದ್ದರು. ಬಾಲಕೃಷ್ಣ ರೈ ಪೊರ್ದಾಳ್ ಕಾರ್ಯಕ್ರಮ ನಿರೂಪಿಸಿದರು. ನವ್ಯಶ್ರೀ ರೆಂಜಿಲಾಡಿ ಪ್ರಾರ್ಥಿಸಿದರು.