ನೆಲ್ಯಾಡಿ: ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಕಾರುಗಳು ಜಖಂಗೊಂಡು ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಆ.31ರಂದು ಮಧ್ಯಾಹ್ನ ಗುಂಡ್ಯ-ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಬಿಳಿನೆಲೆ ಗ್ರಾಮದ ಕೆಂಜಾಳ ರೈಲ್ವೆ ಬ್ರಿಡ್ಜ್ ಬಳಿ ನಡೆದಿದೆ.
ತುಮಕೂರು ನಿವಾಸಿ ರವೀಶ್ ಹೆಚ್.ಜಿ.ಎಂಬವರು ಸುಬ್ರಹ್ಮಣ್ಯದಿಂದ ಗುಂಡ್ಯ ಕಡೆಗೆ ಚಲಾಯಿಸಿಕೊಂಡು ಬರುತ್ತಿದ್ದ ಕಾರು (ಕೆಎ52, ಎನ್ 8640) ಹಾಗೂ ನರಸಿಂಹ ಎಂಬವರು ಗುಂಡ್ಯ ಕಡೆಯಿಂದ ಸುಬ್ರಹ್ಮಣ್ಯ ಕಡೆಗೆ ಚಲಾಯಿಸಿಕೊಂಡು ಹೋಗುತ್ತಿದ್ದ ಕಾರು( ಕೆಎ 42 ಎನ್ 8207)ನಡುವೆ ಕೆಂಜಾಳ ರೈಲ್ವೆ ಬ್ರಿಡ್ಜ್ ಬಳಿ ಡಿಕ್ಕಿ ಸಂಭವಿಸಿದೆ. ಘಟನೆಯಲ್ಲಿ ಕಾರುಗಳ ಜಖಂಗೊಂಡಿದ್ದು ಪ್ರಯಾಣಿಕರು ಅಪಾಯದಿಂದ ಪಾರಾಗಿದ್ದಾರೆ. ತುಮಕೂರು ನಿವಾಸಿ ರವೀಶ್ ಹೆಚ್.ಜಿ.ಅವರು ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಕೇಸು ದಾಖಲಾಗಿದೆ.