ದರ್ಬೆ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘಕ್ಕೆ 2ನೇ ಬಾರಿ ಎಸ್‌ಸಿಡಿಸಿಸಿ ಬ್ಯಾಂಕ್ ಪ್ರಶಸ್ತಿ

0

ಪುತ್ತೂರು: ದರ್ಬೆ ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘದ 2024-25ನೇ ಸಾಲಿನ ಸಾಧನೆಗಾಗಿ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನಿಂದ ಸತತ 2ನೇ ಬಾರಿ ಸಾಧನಾ ಪ್ರಶಸ್ತಿ ಲಭಿಸಿದೆ.

ಸೆ.30ರಂದು ಮಂಗಳೂರಿನಲ್ಲಿ ನಡೆದ ದ.ಕ.ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಅಧ್ಯಕ್ಷ ಡಾ| ಎಂ.ಎನ್.ರಾಜೇಂದ್ರ ಕುಮಾರ್‌ರವರು ಸಣ್ಣ ಕೈಗಾರಿಕಾ ಅಭಿವೃದ್ಧಿ ಸಹಕಾರ ಸಂಘದ ಅಧ್ಯಕ್ಷರ ಅನುಪಸ್ಥಿತಿಯಲ್ಲಿ ನಿರ್ದೇಶಕಿ ಮೀನಾಕ್ಷಿ ಕೆ. ಹಾಗೂ ಕಾರ್ಯದರ್ಶಿ ಈಶ್ವರ ಭಟ್ ಮಜಲುಗುಡ್ಡೆಯವರಿಗೆ ಪ್ರಶಸ್ತಿ ಪ್ರದಾನ ಮಾಡಿದರು. ಸಂಘದ ನಿರ್ದೇಶಕರಾದ ರಾಜೇಶ್ ಕೃಷ್ಣಪ್ರಸಾದ್ ಬಿ.ಎಸ್. ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here