ನಿಡ್ಪಳ್ಳಿ: ದ.ಕ.ಜಿಲ್ಲಾ ಪಂಚಾಯತ್ ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ಹಾಗೂ ದ.ಕ.ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆ ಪಾಣಾಜೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಬಾಲಕ ಬಾಲಕಿಯರ ಕಬಡ್ಡಿ ಪಂದ್ಯಾಟ- 2025 ಕಾರ್ಯಕ್ರಮ ಸೆ.3ರಂದು ಪಾಣಾಜೆ ಪ್ರಾಥಮಿಕ ಶಾಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಉದ್ಘಾಟನಾ ಕಾರ್ಯಕ್ರಮ ಬೆಳಿಗ್ಗೆ ಗಂಟೆ 9ಕ್ಕೆ ನಡೆಯಲಿದ್ದು, ಪಾಣಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಮೈಮುನಾತುಲ್ ಮೆಹ್ರಾ ಉದ್ಘಾಟಿಸಲಿದ್ದಾರೆ. ಎಸ್.ಡಿ.ಎಂ.ಸಿ ಅಧ್ಯಕ್ಷ ಉಮ್ಮರ್ ಜನಪ್ರಿಯ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ಮಿತ್ತಡ್ಕ ಶಾಲಾ ನಿವೃತ್ತ ಪ್ರಭಾರ ಮುಖ್ಯ ಶಿಕ್ಷಕ ಮುತ್ತಪ್ಪ ಪೂಜಾರಿ ಮತ್ತು ಕಕ್ಕೂರು ಶಾಲಾ ನಿವೃತ್ತ ಶಿಕ್ಷಕ ವಿಷ್ಣು ಭಟ್ ಮುಂಡೂರು ಇವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಅನೇಕ ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು.
ಸಂಜೆ ಗಂಟೆ 4ರಿಂದ ಪಾಣಾಜೆ ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಜಯಶ್ರೀ.ಡಿ ಇವರ ಅಧ್ಯಕ್ಷತೆಯಲ್ಲಿ ಸಮಾರೋಪ ಸಮಾರಂಭ ನಡೆಯಲಿದ್ದು, ಹಲವಾರು ಗಣ್ಯರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿರುವರು ಎಂದು ಶಾಲಾ ದೈಹಿಕ ಶಿಕ್ಷಣ ಶಿಕ್ಷಕ ಸುಧಾಕರ ರೈ.ಜಿ ಮತ್ತು ಸಂಘಟಕರು ತಿಳಿಸಿದ್ದಾರೆ.