ಟೇಬಲ್ ಟೆನ್ನಿಸ್ ಪಂದ್ಯಾಟ : ಫಿಲೋಮಿನಾ ಪ.ಪೂ.ಕಾಲೇಜಿನ ವಿದ್ಯಾರ್ಥಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

0

ಪುತ್ತೂರು: ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ದ.ಕ ಜಿಲ್ಲೆ ಮಂಗಳೂರು  ಹಾಗೂ ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಸೆ.1ರಂದು ನಡೆದ ಪುತ್ತೂರು ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜುಗಳ ‘ಟೇಬಲ್ ಟೆನ್ನಿಸ್ ಪಂದ್ಯಾಟ ಸ್ಪರ್ಧೆ -2025-26’ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ.ಪೂ. ಕಾಲೇಜಿನ ಬಾಲಕರ ಹಾಗೂ ಬಾಲಕಿಯರ ವಿಭಾಗವು ದ್ವಿತೀಯ ಸ್ಥಾನವನ್ನು ಪಡೆದಿರುತ್ತಾರೆ.

ಬಾಲಕರ ವಿಭಾಗದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಮೊಹಮ್ಮದ್ ರಾಶಿದ್ ಮಹಾರೂಫ್ ಇವರು ಮೂಡಬಿದ್ರೆ ಎಕ್ಸಲೆಂಟ್ ಪದವಿ ಪೂರ್ವ ಕಾಲೇಜುನಲ್ಲಿ ನಡೆಯಲಿರುವ ದಕ್ಷಿಣ ಕನ್ನಡ  ಜಿಲ್ಲಾ ಮಟ್ಟದ ಬಾಲಕರ ಟೇಬಲ್ ಟೆನ್ನಿಸ್ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತದೆ. ಸ್ಪರ್ಧೆಯಲ್ಲಿ ಬಾಲಕರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ಅನ್ವಿತ್ ರೈ, ಅತೀಶ್ ಕೆ.ಯು, ದಿಗಂತ್  ವಿ.ಎಸ್ ಹಾಗೂ ದ್ವಿತೀಯ ವಾಣಿಜ್ಯ ವಿಭಾಗದ ನಿಹಾಲ್ ಮತ್ತು ಬಾಲಕಿಯರ ವಿಭಾಗದಲ್ಲಿ ದ್ವಿತೀಯ ವಿಜ್ಞಾನ ವಿಭಾಗದ  ಏಂಜಲಿಕಾ ಮೆಲಾನಿ ಪಿಂಟೋ, ದ್ವಿತೀಯ ಕಲಾ ವಿಭಾಗದ ಜೀವಿತಾ ಹಾಗೂ ಪ್ರಥಮ ವಿಜ್ಞಾನ ವಿಭಾಗದ ಶ್ರೀಶಾ ಆರ್. ಎಸ್ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು.


 ಕಾಲೇಜಿನ  ಪ್ರಾಂಶುಪಾಲರಾದ ರೆ.ಫಾ.ಅಶೋಕ್ ರಾಯನ್ ಕ್ರಾಸ್ತಾ  ಆಟಗಾರರನ್ನು ಅಭಿನಂದಿಸಿ ಶುಭಹಾರೈಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ. ಏಲಿಯಾಸ್ ಪಿಂಟೋ ಮತ್ತು ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here