ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ ಸಿ ಟ್ರಸ್ಟ್ ಕಡಬ ತಾಲೂಕು ನೆಲ್ಯಾಡಿ ವಲಯ ಮತ್ತು ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ಇವುಗಳ ಆಶ್ರಯದಲ್ಲಿ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಗಾಗಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮವು ಭಿಷಪ್ ಪೋಲಿಕಾರ್ಪೋಸ್ ಪಬ್ಲಿಕ್ ಸ್ಕೂಲ್ ,ಸಂತ ಅಂಥೊನಿ ಪ್ರೌಢ ಶಾಲೆ ಉದನೆಯಲ್ಲಿ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ನೆಲ್ಯಾಡಿ ಶ್ರೀ ಕ್ಷೇ,ಧ,ಗ್ರಾ ಯೋಜನೆ ವಲಯಾದ್ಯಕ್ಷ ಕುಶಾಲಪ್ಪ ಗೌಡ P.N ಮಾರ್ಗದರ್ಶನ ನೀಡಿದರು. ಕಾರ್ಯಕ್ರಮ ಉದ್ಘಾಟನೆಯನ್ನು ಸೈಂಟ್ ಅಂಟನಿಸ್ ವಿದ್ಯಾಸಂಸ್ಥೆಗಳ ಮೇಲ್ವಿಚಾರಕ ಡೀಕನ್ ಸಂದೇಶ್ ಜಾರ್ಜ್ ನೆರವೇರಿಸಿದರು.

ಮುಖ್ಯ ಅತಿಥಿಗಳಾಗಿ ಉದನೆ ಸಂತ ಅಂಥೊನಿ ಪ್ರೌಢ ಶಾಲೆಯ ಮುಖ್ಯಗುರು ಸಿಬಿಚನ್ ಟಿ ಸಿ , ಶ್ರೀಧರ ಗೌಡ ಬಿ, ಉದನೆ ಸಾರ್ವಜನಿಕ ಗಣೇಶೋತ್ಸವ ಸಮಿತಿಯ ಗೌರವಾಧ್ಯಕ್ಷ ದಿವಾಕರ ಗೌಡ ಎಸ್ ಎ, ಪುತ್ತಿಗೆ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಧ್ಯಕ್ಷ ಲೋಕಯ್ಯ ಗೌಡ, ಪುಂಚಪ್ಪಾಡಿ ಸಮರ್ಥ ಜನಸೇವಾ ಟ್ರಸ್ಟ್ ಅಧ್ಯಕ್ಷ ಗಿರಿಶಂಕರ ಸುಲಾಯ ಮಾತನಾಡಿ, ದುಶ್ಚಟ ಮುಕ್ತ ಸಮಾಜಕ್ಕಾಗಿ ಡಾ. ಡಿ ವೀರೇಂದ್ರ ಹೆಗ್ಗಡೆಯವರು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಮುಖಾಂತರ ಹಲವಾರು ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಅಭಿನಂದನೀಯ ಎಂದರು.
ಸಂಪನ್ಮೂಲ ವ್ಯಕ್ತಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಟ್ರಸ್ಟ್ ರಿ. ಕಡಬ ಇದರ ಅಧ್ಯಕ್ಷ ಮಹೇಶ್ ಕೆ. ಸವಣೂರು ಮಾತನಾಡಿ, ಮಾದಕ ವಸ್ತುಗಳು ಮತ್ತು ಇನ್ನಿತರ ದುಶ್ಚಟಗಳಿಂದ ಉಂಟಾಗುವ ಪರಿಣಾಮಗಳ ಬಗ್ಗೆ ಮಾಹಿತಿ ನೀಡುತ್ತಾ ಉತ್ತಮ ಶಿಕ್ಷಣ ಪಡಕೊಂಡವರೆ ದುಶ್ಚಟಗಳಿಗೆ ಬಲಿಯಾಗುತ್ತಿರುವುದು ವಿಪರ್ಯಾಸವೆಂದರೂ ಶಿಕ್ಷಣದೊಂದಿಗೆ ಆದರ್ಶಪ್ರಾಯವಾಗಿ ಬದುಕುವುದರಿಂದ ಶಿಕ್ಷಣಕ್ಕೆ ಅರ್ಥ ಬರುತ್ತದೆ ಎಂದರು.

ಸಭೆಯಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಸದಸ್ಯರಾದ ಗಂಗಾಧರ, ರಾಜೇಶ್ ಇಡ್ಯಾಡಿ, ಪುತ್ತಿಗೆ ಒಕ್ಕೂಟದ ಸೇವಪ್ರತಿನಿಧಿ ಪ್ರಿಯಾಲತ ಮತ್ತು ಶಿಕ್ಷಕ ವೃಂದದವರು , ವಿದ್ಯಾರ್ಥಿ,ವಿದ್ಯಾರ್ಥಿನಿಯರು ಉಪಸ್ಥಿತರಿದ್ದರು.
ವಲಯ ಮೇಲ್ವಿಚಾರಕ ಆನಂದ್ ಡಿ. ಬಿ.ರವರು ಪ್ರಾಸ್ತಾವಿಕ ಮಾತುಗಳೊಂದಿಗೆ ಸ್ವಾಗತಿಸಿದರು, ಸಂತ ಅಂತೋಣಿ ವಿದ್ಯಾಸಂಸ್ಥೆಗಳ ಗುರು ಯಶೋಧರ ವಂದಿಸಿದರು,ಸುಮಿತ್ರ ಎಸ್. ಉದನೆ ಕಾರ್ಯಕ್ರಮವನ್ನು ನಿರ್ವಹಿಸಿದರು.