ಪುತ್ತೂರು: ಪಡುಬೆಟ್ಟು ಸರಕಾರಿ ಹಿ.ಪ್ರಾ. ಶಾಲಾ ಮೈದಾನದಲ್ಲಿ ನಡೆದ ಪುತ್ತೂರು ತಾಲೂಕು ಮಟ್ಟದ 14ರ ವಯೋಮಿತಿಯ ಬಾಲಕ-ಬಾಲಕಿಯರ ವಾಲಿಬಾಲ್ ಪಂದ್ಯಾಟದಲ್ಲಿ ಪಾಪೆಮಜಲು ಸರಕಾರಿ ಪ್ರೌಢ ಶಾಲಾ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ. 8ನೇ ತರಗತಿಯ ವಿದ್ಯಾರ್ಥಿನಿಯರಾದ ಕೆ ವಿ ಲಾಸ್ಯ, ಶಿಫಾಲಿ, ಹರ್ಷಿಣಿ, ಯಶಸ್ವಿನಿ, ನವನಿ ಆಟವಾಡಿದ್ದು, ಉತ್ತಮ ಬಾಲ್ ಎತ್ತುವಿಕೆಯಲ್ಲಿ ಖುಷಿ ವೈಯಕ್ತಿಕ ಬಹುಮಾನ ಮತ್ತು ತಂಡದ ನಾಯಕಿ ಸಿಂಚನಾ ಎಂ ಎಸ್ ಸರ್ವಾಂಗೀಣ ಆಟಗಾರ್ತಿ ಪ್ರಶಸ್ತಿ ಪಡೆದಿದ್ದಾರೆ. ತಂಡಕ್ಕೆ ಶಾಲಾ ಮುಖ್ಯ ಶಿಕ್ಷಕ ಮೋನಪ್ಪ ಬಿ, ಎಸ್ಡಿಎಂಸಿ ಕಾರ್ಯಾಧ್ಯಕ್ಷ ಇಕ್ಬಾಲ್ ಹುಸೇನ್ ಮಾರ್ಗದರ್ಶನದಲ್ಲಿ ಶಾಲಾ ದೈಹಿಕ ಶಿಕ್ಷಣ ಶಿಕ್ಷಕಿ ಪ್ರವೀಣ ರೈ ತರಬೇತಿ ನೀಡಿದ್ದಾರೆ.