ರಾಮಕುಂಜ: ಕಡಬ ತಾಲೂಕಿನ ಕೊೖಲ ಗ್ರಾಮದ ಆತೂರು ಶ್ರೀ ಸದಾಶಿವ ಮಹಾಗಣಪತಿ ದೇವಸ್ಥಾನದ ಮುಂದಿನ ಬ್ರಹ್ಮಕಲಶದ ಪ್ರಯುಕ್ತ ಪರಿಹಾರ ಪ್ರಾಯಶ್ಚಿತ ಕಾರ್ಯಕ್ರಮಗಳು ಮೂರು ದಿನಗಳ ಕಾಲ ಬ್ರಹ್ಮಶ್ರೀ ನಾಗೇಶ ತಂತ್ರಿಯವರ ನೇತೃತ್ವದಲ್ಲಿ ದೇವಸ್ಥಾನದಲ್ಲಿ ನಡೆಯಿತು.
ಆ.29ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ಸ್ವಸ್ತಿ ಪುಣ್ಯಾಹ ವಾಚನ, 12 ತೆಂಗಿನಕಾಯಿ ಮಹಾಗಣಪತಿ ಹೋಮ, ನವಕಕಲಶ ಪೂಜೆ, ಶತರುದ್ರಾಭಿಷೇಕ, ಸಗ್ರಹಮಖ ಮೃತ್ಯುಂಜಯ ಹೋಮ, ಬಿಲ್ವಾರ್ಚನೆ, ಏಕಾದಶ ಬ್ರಾಹ್ಮಣ ಆರಾಧನೆ, ಮುಷ್ಟಿಕಾಣಿಕೆ ಸಮರ್ಪಣೆ, ಆಶ್ಲೇಷ ಬಲಿ, ದೈವಗಳಿಗೆ ತಂಬಿಲ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಅನ್ನಸಂತರ್ಪಣೆ ನಡೆದು, ಸಂಜೆ ಮಹಾಸುದರ್ಶನ ಹೋಮ, ದುರ್ಗಾಪೂಜೆ, ಆವಾಹಣೆ, ಬಾಧಾಕರ್ಷಣೆ, ಉಚ್ಚಾಟನೆ ನಂತರ ಅನ್ನಸಂತರ್ಪಣೆ ನಡೆಯಿತು.
ಆ.30ರಂದು ಬೆಳಿಗ್ಗೆ ಮಹಾಗಣಪತಿ ಹೋಮ, ತಿಲಹೋಮ, ಸುಕೃತ ಹೋಮ, ದ್ವಾದಶ ನಾಮ ಪೂಜೆ, ದ್ವಾದಶ ಮೂರ್ತಿ ಆರಾಧನೆ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ. ಸಂಜೆ ಸ್ವಸ್ತಿ ಪುಣ್ಯಾಹ ವಾಚನ, ಪ್ರಾಸಾದ ಶುದ್ಧಿ, ರಕ್ಷೋಘ್ನ ಹೋಮ, ವಾಸ್ತು ಹೋಮ, ವಾಸ್ತು ಪೂಜಾ ಬಲಿ ನಂತರ ಅನ್ನಸಂತರ್ಪಣೆ ನಡೆಯಿತು. ಆ.31ರಂದು ಬೆಳಿಗ್ಗೆ ಗಂಟೆ 8:೦೦ರಿಂದ ಮಹಾಗಣಪತಿ ಹೋಮ, ತಿಲಹೋಮ, ಸುಕೃತ ಹೋಮ, ಚಕ್ರಾಬ್ಜ ಮಂಡಲ ಪೂಜೆ, ಸಾಯುಜ್ಯ ಪೂಜೆ, ಕಲಶ ಪೂಜೆ, ಮಧ್ಯಾಹ್ನ ಕಲಶಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ ನಡೆಯಿತು.
ಈ ಸಂದರ್ಭದಲ್ಲಿ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರು, ಸದಸ್ಯರು, ಜೀಣೋದ್ಧಾರ ಸಮಿತಿಯ ಪದಾಧಿಕಾರಿಗಳು. ಉತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಮತ್ತಿತರರ ಪ್ರಮುಖರು ಉಪಸ್ಥಿತರಿದ್ದರು.