ಉಪ್ಪಿನಂಗಡಿ: ವಿದ್ಯಾಭಾರತಿ ಕರ್ನಾಟಕ ದಕ್ಷಿಣ ಕನ್ನಡದ ವತಿಯಿಂದ ಜಿಲ್ಲಾ ಮಟ್ಟದ ಜ್ಞಾನ ವಿಜ್ಞಾನ ಮೇಳ, ವೇದಗಣಿತ ಮತ್ತು ಸಂಸ್ಕೃತಿ ಜ್ಞಾನ ಮಹೋತ್ಸವ ಸ್ಪರ್ಧೆಯು ಕಲ್ಲಡ್ಕದ ಶ್ರೀರಾಮ ಆಂಗ್ಲ ಮಾಧ್ಯಮ ಶಾಲೆಯಲ್ಲಿ ನಡೆದಿದ್ದು, ಇದರಲ್ಲಿ ಉಪ್ಪಿನಂಗಡಿಯ ಇಂದ್ರಪ್ರಸ್ಥ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಹಲವು ಪ್ರಶಸ್ತಿ ಲಭ್ಯವಾಗಿದೆ.
ತರುಣ ವರ್ಗದ ವಿಜ್ಞಾನ ರಸಪ್ರಶ್ನೆ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರಾದ ಅಕ್ಷತ ಗಂಗಾ, ಪಿ.ವಿ. ವಿಧಿಶಾ, ಅನಫಾ ಪ್ರಥಮ ಸ್ಥಾನ ಪಡೆದರು. ಜೀವಶಾಸ್ತ್ರ ಪ್ರಯೋಗ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಯಶ್ವಿತ್ ಕೆ. ಪ್ರಥಮ ಸ್ಥಾನ, ವಿಜ್ಞಾನ ಪಿ.ಪಿ.ಟಿ ಪ್ರೆಸೆಂಟೆಶನ್ ಸ್ಪರ್ಧೆಯಲ್ಲಿ ಪ್ರಥಮ ಪಿ.ಯು.ಸಿ ವಿದ್ಯಾರ್ಥಿನಿ ಪ್ರಾರ್ಥನಾ ಹೆಚ್.ಕೆ. ಪ್ರಥಮ ಸ್ಥಾನ, ಭೌತಶಾಸ್ತ್ರ ಪ್ರಯೋಗ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿ ಪ್ರಣಮ್ ದ್ವಿತೀಯ ಸ್ಥಾನ ಮತ್ತು ಗಣಿತ ಮಾದರಿ ಸ್ಪರ್ಧೆಯಲ್ಲಿ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ರುಚಿಕಾ ತೃತೀಯ ಸ್ಥಾನ ಪಡೆದುಕೊಂಡಿರುತ್ತಾರೆ.
ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಗಳು ರಾಜ್ಯ ಮಟ್ಟದ ಜ್ಞಾನ ವಿಜ್ಞಾನ ಮೇಳಕ್ಕೆ ಆಯ್ಕೆಯಾಗಿರುತ್ತಾರೆ ಎಂದು ಸಂಸ್ಥೆಯ ಪ್ರಾಂಶುಪಾಲ ಹೆಚ್.ಕೆ ಪ್ರಕಾಶ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.