ಪುತ್ತೂರು: ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉಪನಿರ್ದೇಶಕರ ಕಛೇರಿ (ಆಡಳಿತ) ದ.ಕ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ, ಮಂಗಳೂರು ದಕ್ಷಿಣ ವಲಯ ಹಾಗೂ ಪಿ.ಎಂ.ಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಉಚ್ಚಿಲ ಗುಡ್ಡೆ, ಸೋಮೇಶ್ವರ ಇದರ ಸಹಯೋಗದೊಂದಿಗೆ ನಡೆದ ದಕ್ಷಿಣ ಕನ್ನಡ ಜಿಲ್ಲಾಮಟ್ಟದ 17ರ ವಯೋಮಾನದ ಬಾಲಕಿಯರ ವಿಭಾಗದ ಕರಾಟೆ ಪಂದ್ಯಾಟದಲ್ಲಿ ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ವಿದ್ಯಾರ್ಥಿನಿಯರಾದ ಖುಷಿ ಕೆ.ಎಂ (10ನೇ) (ಕೆ.ವಿ ಮಂಜುನಾಥ ಹಾಗೂ ಭವ್ಯ ದಂಪತಿಯ ಪುತ್ರಿ) ಪ್ರಥಮ ಮತ್ತು ರಂಶ ಡಿ.ಕೆ (10ನೇ) (ಮಹಮ್ಮದ್ ಶರೀಫ್ ಡಿ.ಕೆ. ಹಾಗೂ ರೇಶ್ಮಾ ಎಚ್.ಎ. ದಂಪತಿ ಪುತ್ರಿ) ಪ್ರಥಮ ಸ್ಥಾನ ಪಡೆದು ರಾಜ್ಯಮಟ್ಟದ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಇವರು ಇಂಪ್ಯಾಕ್ಟ್ ಆರ್ಟ್ ಆಂಡ್ ಸ್ಪೋರ್ಟ್ಸ್ ಕರಾಟೆ ಅಕಾಡೆಮಿ ಮುಖ್ಯಸ್ಥರಾದ ಶಿಹಾನ್ ಟಿ.ಡಿ ತೋಮಸ್‌ರವರಲ್ಲಿ ತರಬೇತಿ ಪಡೆಯುತ್ತಿದ್ದಾರೆ. ಇಚ್ಛಿಕಾ (10ನೇ) (ಪ್ರದೀಪ್ ಜೈನ್ ಹಾಗೂ ಪ್ರೇಕ್ಷಾ ಎಸ್ ದಂಪತಿ ಪುತ್ರಿ) ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದ್ದಾರೆ.
Home ಇತ್ತೀಚಿನ ಸುದ್ದಿಗಳು ಕರಾಟೆ ಸ್ಪರ್ಧೆ: ಸಂತ ವಿಕ್ಟರ್ ಬಾಲಿಕಾ ಪ್ರೌಢಶಾಲೆಯ ಖುಷಿ ಕೆ.ಎಂ, ರಂಶ ಡಿ.ಕೆ. ರಾಜ್ಯಮಟ್ಟಕ್ಕೆ