ಚೆಕ್ ವಂಚನೆ ಪ್ರಕರಣ : ಆರೋಪಿಯ ಬಂಧನ

0


ಉಪ್ಪಿನಂಗಡಿ: ಚೆಕ್ ವಂಚನೆ ಪ್ರಕರಣದಲ್ಲಿ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಬಜತ್ತೂರು ಗ್ರಾಮದ ನಿವಾಸಿ ಸಜಿತ್ ಕುಮಾರ್ ಅಲಿಯಾಸ್ ಪವನ್ (36) ಎಂಬಾತನನ್ನು ಉಪ್ಪಿನಂಗಡಿ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.


ಮಂಗಳೂರಿನ ಜೆಎಂಎಫ್‌ಸಿ 8ನೇ ನ್ಯಾಯಾಲಯದಲ್ಲಿ ದಾಖಲಾಗಿದ್ದ ಪ್ರಕರಣವೊಂದರ ವಾರಂಟ್ ಆರೋಪಿಯಾಗಿದ್ದ ಈತನನ್ನು ಉಪ್ಪಿನಂಗಡಿ ಪೊಲೀಸ್ ಠಾಣಾ ಎಎಸೈ ದೇವಪ್ಪ ಗೌಡ ಹಾಗೂ ಪಿಸಿ ಮೋಹನ್ ವೈ ಅವರು ಇಲ್ಲಿನ ಬಸ್ ನಿಲ್ದಾಣದ ಬಳಿ ದಸ್ತಗಿರಿ ಮಾಡಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ನ್ಯಾಯಾಲಯವು ಆರೋಪಿಗೆ 3 ತಿಂಗಳ ಸಾದಾ ಶಿಕ್ಷೆಯನ್ನು ವಿಧಿಸಿರುತ್ತದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here