ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡಿಸುತ್ತಿರುವ ಬಪ್ಪಳಿಗೆಯ ಅಂಬಿಕಾ ಪದವಿಪೂರ್ವ ವಿದ್ಯಾಲಯದ ವಿದ್ಯಾರ್ಥಿನಿಯರಾದ ಜ್ಞಾನ ಜಿ.ಪಿ., ಉನ್ನತ ಜಿ.ಟಿ. ಹಾಗೂ ಹರ್ಷಿತಾ ಸಿ.ಆರ್ ಅವರನ್ನೊಳಗೊಂಡ ತಂಡ ಮಂಗಳೂರಿನ ಶಕ್ತಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ವಿದ್ಯಾಭಾರತಿ ಜಿಲ್ಲಾಮಟ್ಟದ 19 ವರ್ಷದೊಳಗಿನ ವಿದ್ಯಾರ್ಥಿನಿಯರ ಟೇಬಲ್ ಟೆನ್ನಿಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ. ಹಾಗೆಯೇ 19 ವರ್ಷದೊಳಗಿನ ಬಾಲಕರ ವಿಭಾಗದಲ್ಲಿ ಶ್ರೀನಿವಾಸ, ಅಮೃತ್ ಕುಮಾರ್ ಎಂ.ಎಚ್., ಯಶಸ್ ಡಿ ಹಾಗೂ ಓಂಕಾರ ಶಾಸ್ತ್ರಿ ಅವರನ್ನೊಳಗೊಂಡ ತಂಡ ದ್ವಿತೀಯ ಸ್ಥಾನ ಗಳಿಸಿದ್ದು, ಶ್ರೀನಿವಾಸ ಅವರು ರಾಜ್ಯಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.