ಪುತ್ತೂರು: ಕುಂಬ್ರ ಪ್ರಾಥಮಿಕ ಕೃಷಿಪತ್ತಿನ ಸಹಕಾರಿ ಸಂಘಕ್ಕೆ 2024-25 ನೇ ಸಾಲಿನ ಸಾಧನೆಗಾಗಿ ಎಸ್‌ಡಿಸಿಸಿ ಬ್ಯಾಂಕ್‌ನಿಂದ ನೀಡಲ್ಪಡುವ ಪ್ರಶಸ್ತಿಯನ್ನು ಮಂಗಳೂರಿನಲ್ಲಿ ನಡೆದ ಕೇಂದ್ರ ಸಹಕಾರಿ ಬ್ಯಾಂಕ್‌ನ ಮಹಾಸಭೆಯಲ್ಲಿ ಪ್ರಧಾನ ಮಾಡಲಾಯಿತು. ಸಂಘವು 11 ನೇ ಬಾರಿಗೆ ಪ್ರಶಸ್ತಿಯನ್ನು ಪಡೆಯುತ್ತಿದ್ದು ಈ ಪ್ರಶಸ್ತಿಯನ್ನು ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷ ಡಾ.ಎಂ.ಎನ್.ರಾಜೇಂದ್ರ ಕುಮಾರ್‌ರವರು ಪ್ರಧಾನ ಮಾಡಿದರು.
ಸಂಘದ ಅಧ್ಯಕ್ಷರಾದ ಪ್ರಕಾಶ್ಚಂದ್ರ ರೈ ಕೈಕಾರ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭವಾನಿ ಬಿ.ಆರ್‌ವರವರು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಡಿಸಿಸಿ ಬ್ಯಾಂಕ್ ನಿರ್ದೇಶಕರುಗಳಾದ ಟಿ.ಜಿ ರಾಜಾರಾಮ್ ಭಟ್, ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್.ಬಿ.ಜಯರಾಮ ರೈ, ಕುಂಬ್ರ ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರುಗಳಾದ ಶಿವರಾಮ ಬೊಳ್ಳಾಡಿ,ಶ್ರೀನಿವಾಸ ಪ್ರಸಾದ್ ಮುಡಾಲ, ರಾಜೀವಿ ಎಸ್.ರೈ, ಮಲ್ಲಿಕಾ ಎ.ಜೆ, ಶಾಖಾ ವ್ಯವಸ್ಥಾಪಕ ರಾಜ್‌ಪ್ರಕಾಶ್ ರೈ ಕುಂಬ್ರ ಉಪಸ್ಥಿತರಿದ್ದರು.