ಪುತ್ತೂರು: ದ. ಕ ಜಿಲ್ಲಾಡಳಿತ, ದ. ಕ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ತಾಲೂಕು ಪಂಚಾಯತ್ ಪುತ್ತೂರು, ನಗರಸಭೆ ಪುತ್ತೂರು, ತಾಲೂಕು ಯುವಜನ ಒಕ್ಕೂಟ (ರಿ) ಪುತ್ತೂರು, ಜಿಲ್ಲಾ ಪ್ರಶಸ್ತಿ ಪುರಸ್ಕೃತ ಶ್ರೀ ವಿಷ್ಣು ಯುವಶಕ್ತಿ ಬಳಗ(ರಿ) ಮುಜ್ಜಾರಡ್ಕ, ಸಂತ ಫಿಲೋಮಿನಾ ಕಾಲೇಜು ಪುತ್ತೂರು ಮತ್ತು ಸರಕಾರಿ ಪ. ಪೂ ಕಾಲೇಜು ಕೊಂಬೆಟ್ಟು ಪುತ್ತೂರು ಇವುಗಳ ಸಂಯುಕ್ತ ಆಶ್ರಯದಲ್ಲಿ ಆ.31 ರಂದು ತಾಲೂಕು ಕ್ರೀಡಾಂಗಣ ಕೊಂಬೆಟ್ಟು ಪುತ್ತೂರು ಇಲ್ಲಿ ನಡೆದ ‘ತಾಲೂಕು ದಸರಾ ಕ್ರೀಡಾಕೂಟ 2025 – 26’ ಸ್ಪರ್ಧೆಯಲ್ಲಿ ಸಂತ ಫಿಲೋಮಿನಾ ಪ. ಪೂ ಕಾಲೇಜಿನ ವಿದ್ಯಾರ್ಥಿಗಳು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡಿರುತ್ತಾರೆ.
ದ್ವಿತೀಯ ವಾಣಿಜ್ಯ ವಿಭಾಗದ ಕಿಶನ್ ಯೋಗ ಸ್ಪರ್ಧೆಯಲ್ಲಿ ದ್ವಿತೀಯ, ದ್ವಿತೀಯ ಕಲಾ ವಿಭಾಗದ ದಿಶಾನ್ ಎಂ ಈಟಿ ಎಸೆತದಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ದ್ವಿತೀಯ ಕಲಾವಿಭಾಗದ ದಿಶಾ ತೃತೀಯ, ಪ್ರಥಮ ವಿಜ್ಞಾನ ವಿಭಾಗದ ಶ್ರೀ ವರ್ಣ ಪಿ. ಡಿ ಉದ್ದ ಜಿಗಿತದಲ್ಲಿ ತೃತೀಯ ಹಾಗೂ 4×100 ಮೀ ರಿಲೇಯಲ್ಲಿ ಪ್ರಥಮ, ಎತ್ತರ ಜಿಗಿತದಲ್ಲಿ ಪ್ರಥಮ ವಿಜ್ಞಾನ ವಿಭಾಗದ ಸುಹಾಸ್ ರಾಮ್ ತೃತೀಯ, ದ್ವಿತೀಯ ವಾಣಿಜ್ಯ ವಿಭಾಗದ ರೋಹನ್ ಬೋಪಣ್ಣ, ಅಭಿನ್ ಗೌಡ, ನಿಶ್ಚಿತ್ 4×400ಮೀ ರಿಲೇಯಲ್ಲಿ ಪ್ರಥಮ ಹಾಗೂ 4×100ಮೀ ರಿಲೇಯಲ್ಲಿ ದ್ವಿತೀಯ ಹಾಗೂ 100 ಮೀ ಮತ್ತು 200ಮೀ ಓಟದಲ್ಲಿ ರೋಹನ್ ಬೋಪಣ್ಣ ಪ್ರಥಮ ಸ್ಥಾನವನ್ನು ಪಡೆದುಕೊಂಡಿರುತ್ತಾರೆ. ಶ್ರೀವರ್ಣ. ಪಿ. ಡಿ, ದಿಶಾನ್ ಎಂ, ರೋಹನ್ ಬೋಪಣ್ಣ, ಅಭಿನ್ ಗೌಡ, ನಿಶ್ಚಿತ್ ಇವರು ಸೆ 7 ರಂದು ಮಂಗಳೂರಿನ ಮಂಗಳ ಕ್ರೀಡಾಂಗಣದಲ್ಲಿ ನಡೆಯಲಿರುವ ಜಿಲ್ಲಾಮಟ್ಟದ ದಸರಾ ಕ್ರೀಡಾಕೂಟ ಸ್ಪರ್ಧೆಗೆ ಆಯ್ಕೆ ಆಗಿರುತ್ತಾರೆ.
ಕಾಲೇಜಿನ ಪ್ರಾಂಶುಪಾಲರಾದ ರೆ.ಫಾ. ಅಶೋಕ್ ರಾಯನ್ ಕ್ರಾಸ್ತಾ ವಿದ್ಯಾರ್ಥಿಗಳನ್ನು ಅಭಿನಂದಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಡಾ.ಏಲಿಯಾಸ್ ಪಿಂಟೋ ಹಾಗೂ ರಾಜೇಶ್ ಮೂಲ್ಯ ಉಪಸ್ಥಿತರಿದ್ದರು.