ವಿಟ್ಲ: ಗ್ರಾಮಾಭಿವೃದ್ಧಿ ಯೋಜನೆಯ ಸ್ವಾಸ್ಥ್ಯ ಸಂಕಲ್ಪ ಸಮಾರೋಪ ಸಮಾರಂಭ

0

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವಿಟ್ಲ ತಾಲೂಕಿನ ವಿಟ್ಲ ವಲಯದ ವಿಠಲ ಪದವಿಪೂರ್ವ ಕಾಲೇಜ್‌ನಲ್ಲಿ ನಡೆದ ವಿಟ್ಲ ತಾಲೂಕಿನ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು.

ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಜನಜಾಗೃತಿ ಪ್ರಾದೇಶಿಕ ನಿರ್ದೇಶಕರಾದ ವಿವೇಕ್ ವಿನ್ಸೆಂಟ್ ಪಾಯಸ್ ಮಾತನಾಡಿ ಪ್ರಸ್ತುತ ದಿನಗಳಲ್ಲಿ ವಿದ್ಯಾರ್ಥಿಗಳು ಅತೀ ಹೆಚ್ಚು ವ್ಯಸನಗಳಿಗೆ ಬಲಿಯಾಗುತ್ತಿರುವ ಬಗ್ಗೆ ಕಳವಳ ವ್ಯಕ್ತ ಪಡಿಸಿ. ಇದಕ್ಕೆ ಕಾರಣಗಳು ಬಗ್ಗೆ ವಿವರಣೆ ನೀಡಿದರು.

ವ್ಯಸನಗಳಿಂದ ದೂರವಿರಲು ಬೇಕಾದ ಮಾರ್ಗದರ್ಶನ ನೀಡಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿಠಲ ಎಜುಕೇಶನ್ ಟ್ರಸ್ಟ್ ಅಧ್ಯಕ್ಷರಾದ ಮುಳಿಯ ತಿರುಮಲೇಶ್ವರ ಭಟ್ ವಹಿಸಿದ್ದರು. ವೇದಿಕೆಯಲ್ಲಿ ಬಂಟ್ವಾಳ ತಾಲೂಕು ಜನಜಾಗೃತಿ ಮಾಜಿ ಅಧ್ಯಕ್ಷರುಗಳಾದ ಕೈಯೂರ್ ನಾರಾಯಣ ಭಟ್, ಬಾಲಕೃಷ್ಣ ಆಳ್ವ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ಸುರೇಶ ಗೌಡ, ಕಾಲೇಜು ಪ್ರಭಾರ ಪ್ರಾಂಶುಪಾಲ ಅಣ್ಣಪ್ಪ ಶಾಸ್ತರ, ರೇಣುಕಾ ಕಣಿಯೂರ್ ಉಪಸ್ಥಿತರಿದ್ದರು. ವಲಯದ ಮೇಲ್ವಿಚಾರಕ ಜಗದೀಶ್ ಪೂಜಾರಿ ಕಾರ್ಯಕ್ರಮ ನಿರೂಪಿಸಿದರು. ವಲಯದ ಸೇವಾಪ್ರತಿನಿಧಿ ಮತ್ತು ವಿಪತ್ತು ಸದಸ್ಯರು ಸಹಕರಿಸಿದರು. ಉಪನ್ಯಾಸಕಿ ಸವಿತ ವಂದಿಸಿದರು.

LEAVE A REPLY

Please enter your comment!
Please enter your name here