ಪುತ್ತೂರು: ದ.ಕ ಜೇನು ವ್ಯವಸಾಯಗಾರರ ಸಹಕಾರಿ ಸಂಘದ 2024–25ನೇ ಸಾಲಿನ ಸಾಧನೆಗಾಗಿ ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನಿಂದ ಸತತ 6ನೇ ಬಾರಿಗೆ ಪ್ರಶಸ್ತಿ ನೀಡಿ ಗೌರವಿಸಿದೆ.
ಆ.30ರಂದು ಮಂಗಳೂರಿನಲ್ಲಿ ನಡೆದ ದ.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಿದರು.
ಸಂಘದ ಅಧ್ಯಕ್ಷ ಚಂದ್ರ ಕೋಲ್ಚಾರ್ ಹಾಗೂ ಆಡಳಿತ ನಿರ್ದೇಶಕ ತಿಮ್ಮಯ್ಯ ಪಿಂಡಿಮನೆ ಪ್ರಶಸ್ತಿ ಸ್ವೀಕರಿಸಿದರು. ಸಂಘದ ನಿರ್ದೇಶಕರಾದ ಪುರುಷೋತ್ತಮ ಭಟ್, ತನಿಯಪ್ಪ ಗೌಡ, ಸಹಾಯಕ ಮಾರಾಟ ಮತ್ತು ಖರೀದಿ ಅಧಿಕಾರಿ ಜಯಾನಂದ ಉಪಸ್ಥಿತರಿದ್ದರು. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ನ ಅಧ್ಯಕ್ಷರು ಹಾಗೂ “ಸಹಕಾರಿ ರತ್ನ” ಡಾ. ಎಂ. ಎನ್. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು. ಬ್ಯಾಂಕ್ನ ಉಪಾಧ್ಯಕ್ಷ ವಿನಯ್ ಕುಮಾರ್ ಸೂರಿಂಜೆ, ನಿರ್ದೇಶಕರಾದ ಶಶಿಕುಮಾರ್ ರೈ ಬಾಲ್ಯೊಟ್ಟು, ಎಸ್. ಬಿ. ಜಯರಾಮ ರೈ, ಕುಶಾಲಪ್ಪ ಗೌಡ ಬೆಳ್ತಂಗಡಿ, ಮನ್ಮಥ ಸುಳ್ಯ, ಮೊದಲಾದವರು ಉಪಸ್ಥಿತರಿದ್ದರು