ಉಪ್ಪಿನಂಗಡಿ: ಪುತ್ತೂರು ವಿಧಾನಸಭಾ ಕ್ಷೇತ್ರದ ಶಾಸಕರಾದ ಅಶೋಕ್ ಕುಮಾರ್ ರೈಯವರ ಹುಟ್ಟುಹಬ್ಬದ ಅಂಗವಾಗಿ ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಯು.ಟಿ. ತೌಸೀಫ್ ಅವರ ನೇತೃತ್ವದಲ್ಲಿ ಉಪ್ಪಿನಂಗಡಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹಣ್ಣು-ಹಂಪಲು ವಿತರಣೆ ಮಾಡಲಾಯಿತು.
ಈ ಸಂದರ್ಭದಲ್ಲಿ ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಡಾ. ರಾಜಾರಾಂ ಕೆ.ಬಿ., ಉಪ್ಪಿನಂಗಡಿ ಗ್ರಾ.ಪಂ. ಉಪಾಧ್ಯಕ್ಷೆ ವಿದ್ಯಾಲಕ್ಷ್ಮೀ ಪ್ರಭು, ಪುತ್ತೂರು ತಾಲೂಕು ಭೂ ನ್ಯಾಯ ಮಂಡಳಿ ಸದಸ್ಯ ಅಬ್ದುರ್ರಹ್ಮಾನ್ ಯುನಿಕ್, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ನಝೀರ್ ಮಠ, ಉಪ್ಪಿನಂಗಡಿ ಬ್ಲಾಕ್ ಕಾರ್ಯಾಧ್ಯಕ್ಷ ವಿಕ್ರಂ ಶೆಟ್ಟಿ ಅಂತರ, ದ.ಕ. ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಶಬೀರ್ ಕೆಂಪಿ, ಆರೋಗ್ಯ ರಕ್ಷಾ ಸಮಿತಿಯ ಸದಸ್ಯರಾದ ಫಾರೂಕ್ ಝಿಂದಗಿ, ಆನಂದ ಸಾಂತ್ಯಡ್ಕ, ಜಯಶೀಲ ಶೆಟ್ಟಿ, ಪ್ರಮುಖರಾದ ಸಿದ್ದೀಕ್ ಕೆಂಪಿ, ಅಬ್ದುಲ್ ಖಾದರ್ ಆದರ್ಶನಗರ, ಶೌಕತ್ ಕೆಮ್ಮಾರ, ಲತೀಫ್ ರಾಮನಗರ, ರಹಿಮಾನ್ ಪೊರುಂಕಾಜೆ, ಸಿದ್ದಿಕ್ ಹ್ಯಾಪಿ ಟೈಮ್, ಗೀತಾ ದಾಸರಮೂಲೆ ಮತ್ತಿತರರು ಉಪಸ್ಥಿತರಿದ್ದರು.