ನೆಲ್ಯಾಡಿ: ಶ್ರೀರಾಮ ವಿದ್ಯಾಲಯದ ವರಮಹಾಲಕ್ಷ್ಮೀ ಪೂಜಾ ಸಮಿತಿ ವತಿಯಿಂದ ಶ್ರೀರಾಮ ವಿದ್ಯಾಸಂಸ್ಥೆಗೆ 38 ಸಾವಿರ ರೂ. ಮೌಲ್ಯದ ಗ್ರೈಂಡರ್ ಕೊಡುಗೆಯಾಗಿ ನೀಡಿದರು.
ಪೂಜಾ ಸಮಿತಿ ಅಧ್ಯಕ್ಷೆ ಸುಪ್ರಿತಾ ರವಿಚಂದ್ರ ಹೊಸವಕ್ಲು ನೂತನ ಗ್ರೈಂಡರ್ ಅನ್ನು ಶಾಲೆಯ ಮುಖ್ಯಶಿಕ್ಷಕ ಗಣೇಶ್ ವಾಗ್ಲೆ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ ಪೂಜಾ ಸಮಿತಿ ಉಪಾಧ್ಯಕ್ಷೆ ಸುಮನ, ಕಾರ್ಯದರ್ಶಿ ಸೌಮ್ಯ ಜಯರಾಜ್, ಕೋಶಾಧಿಕಾರಿ ಸುಮಲತಾ, ನೆಲ್ಯಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಾಲಕೃಷ್ಣ ಬಾಣಜಾಲು, ಉಪಾಧ್ಯಕ್ಷ ರವಿಚಂದ್ರ ಹೊಸವಕ್ಲು, ಶಾಲಾ ಆಂಗ್ಲ ಮಾಧ್ಯಮ ವಿಭಾಗದ ಮುಖ್ಯಶಿಕ್ಷಕಿ ಕಾವ್ಯ, ಆಡಳಿತ ಮಂಡಳಿಯ ಕೋಶಾಧಿಕಾರಿ ಜಿನ್ನಪ್ಪ ಗೌಡ ಪೂವಾಜೆ, ಆಡಳಿತ ಮಂಡಳಿಯ ಸದಸ್ಯರು, ಪೂಜಾ ಸಮಿತಿಯ ಸದಸ್ಯರು, ಶಿಕ್ಷಕಿಯರು ಹಾಗೂ ಅಡುಗೆ ಸಹಾಯಕಿಯರು ಉಪಸ್ಥಿತರಿದ್ದರು.