ವಿಶ್ವವಿದ್ಯಾನಿಲಯ ಕಾಲೇಜ್‌ ನೆಲ್ಯಾಡಿಯಲ್ಲಿ ಶೈಕ್ಷಣಿಕ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮ

0

ನೆಲ್ಯಾಡಿ: ಮಂಗಳೂರು ವಿಶ್ವವಿದ್ಯಾನಿಲಯ ಘಟಕ ಕಾಲೇಜು ನೆಲ್ಯಾಡಿಯಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಪಠ್ಯೇತರ ಚಟುವಟಿಕೆಗಳ ಉದ್ಘಾಟನೆ ಹಾಗೂ ಪ್ರತಿಜ್ಞಾವಿಧಿ ಸ್ವೀಕಾರ ಕಾರ್ಯಕ್ರಮವು ಸೆ.3ರಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಸಂಯೋಜಕರಾದ ಡಾ.ಸುರೇಶ್ ಅವರು ವಹಿಸಿದ್ದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕುಕ್ಕೆ ಶ್ರೀ ಸುಬ್ರಹ್ಮಣ್ಯ ಮಹಾವಿದ್ಯಾಲಯದ ಸಮಾಜಶಾಸ್ತ್ರ ಉಪನ್ಯಾಸಕಿ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿ, ಕಡಬ, ಸುಳ್ಯ ವಲಯದ ರಾಷ್ಟ್ರೀಯ ಸೇವಾ ಯೋಜನಾ ಸಂಚಾಲಕರಾದ ಆರತಿ ಕೆ ಆಗಮಿಸಿ ವಿದ್ಯಾರ್ಥಿಗಳು ಶೈಕ್ಷಣಿಕ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳಬೇಕು ಇದರಿಂದಾಗಿ ವಿದ್ಯಾರ್ಥಿಗಳು ವ್ಯಕ್ತಿತ್ವ ವಿಕಸನ ಹೊಂದಿ ಭವಿಷ್ಯದಲ್ಲಿ ಯಶಸ್ಸು ಸಾಧಿಸಲು ಸಾಧ್ಯ ಎಂದು ಪ್ರೇರಣದಾಯಕವಾದ ನುಡಿಗಳನ್ನಾಡಿದರು.

ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳು ಹಾಗೂ ಎನ್ ಎಸ್ ಎಸ್ ಸ್ವಯಂಸೇವಕರು ಶಿಸ್ತು ನೈತಿಕ ಮೌಲ್ಯಗಳಿಗೆ ಬದ್ಧರಾಗಿರುವುದಾಗಿ ಹಾಗೂ ವ್ಯಸನಮುಕ್ತ ಭಾರತವನ್ನಾಗಿಸುವಲ್ಲಿ ಪ್ರತಿಜ್ಞಾವಿಧಿಯನ್ನು ಸ್ವೀಕರಿಸಿದರು. ವಿದ್ಯಾರ್ಥಿ ಸಂಘದ ಸಂಚಾಲಕರಾದ ಡಾ. ಸೀತಾರಾಮ ಪಿ. ಅವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಸರ್ವರನ್ನು ಪ್ರಸ್ತಾವಿಕ ನುಡಿಗಳೊಂದಿಗೆ ಸ್ವಾಗತಿಸಿದರು. ರಾಷ್ಟ್ರೀಯ ಸೇವಾ ಯೋಜನೆ ಅಧಿಕಾರಿಗಳಾದ ಶ್ರುತಿ ಇವರು ವಂದಿಸಿದರು. ಕು.ಜಯಶ್ರೀ ಕಾರ್ಯಕ್ರಮ ನಿರೂಪಿಸಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಬೋಧಕ ಬೋಧಕೇತರ ವೃಂದದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here