ಯಾವುದಕ್ಕೆಲ್ಲಾ ಇಳಿಕೆಯಾಗಲಿದೆ ಗೊತ್ತಾ?
ಬೆಂಗಳೂರು:ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬುಧವಾರ ದೇಶದ ಜನತೆಗೆ ಸಿಹಿ ಸುದ್ದಿ ನೀಡಿದ್ದು, ಸರಕು ಮತ್ತು ಸೇವಾ ತೆರಿಗೆ(ಜಿಎಸ್‌ಟಿ)ಮಂಡಳಿಯು ಸ್ಲ್ಯಾಬ್‌ಗಳಲ್ಲಿ ಮಹತ್ವದ ಬದಲಾವಣೆಗೆ ಅನುಮೋದನೆ ನೀಡಿದೆ.
ಪ್ರಸ್ತುತ, ನಾಲ್ಕು ಜಿಎಸ್‌ಟಿ ಸ್ಲ್ಯಾಬ್‌ಗಳಿದ್ದು, ಶೇ.5, ಶೇ.12, ಶೇ.18 ಮತ್ತು ಶೇ.28ರಷ್ಟು ತೆರಿಗೆ ವಿಧಿಸಲಾಗುತ್ತಿದೆ.ಇವುಗಳಲ್ಲಿ ಶೇ.12 ಮತ್ತು ಶೇ.28ರ ತೆರಿಗೆ ಸ್ಲ್ಯಾಬ್‌ಗಳನ್ನು ತೆಗೆದುಹಾಕಿ ಕೇವಲ ಶೇ.5 ಮತ್ತು ಶೇ.18ರ ಎರಡು ಹಂತದ ತೆರಿಗೆ ರಚನೆಯನ್ನು ಜಾರಿಗೆ ತರಲು ಸಭೆ ಒಪ್ಪಿಗೆ ಸೂಚಿಸಿದೆ.ಇದೇ ತಿಂಗಳ 22ರಿಂದ ಇದು ಜಾರಿಗೆ ಬರಲಿದೆ.
ಸಾಮಾನ್ಯ ಜನರು ಮತ್ತು ಮಧ್ಯಮ ವರ್ಗದವರು ಬಳಸುವ ವಸ್ತುಗಳ ಮೇಲೆ ಸಂಪೂರ್ಣ ತೆರಿಗೆ ಕಡಿತ ಮಾಡಲಾಗಿದೆ ಎಂದು ನಿರ್ಮಲಾ ಸೀತಾರಾಮನ್ ಅವರು ಘೋಷಿಸಿದ್ದಾರೆ.
ಕೂದಲಿನ ಎಣ್ಣೆ, ಸೋಪು, ಶಾಂಪೂಗಳು, ಹಲ್ಲುಜ್ಜುವ ಬ್ರಷ್‌ಗಳು, ಟೂತ್‌ಪೇಸ್ಟ್, ಸೈಕಲ್‌ಗಳು ಮತ್ತು ಅಡುಗೆ ಸಾಮಾನುಗಳ ಮೇಲಿನ ಜಿಎಸ್‌ಟಿಯನ್ನು ಶೇಕಡಾ 5ಕ್ಕೆ ಇಳಿಸಲಾಗಿದೆ.
ಪಾದರಕ್ಷೆ ಮತ್ತು ಉಡುಪುಗಳ ಮೇಲಿನ ಜಿಎಸ್‌ಟಿ ಇಳಿಕೆಗೆ ಮುಖ್ಯವಾಗಿ ಅನುಮೋದನೆ ನೀಡಲಾಗಿದೆ.2,500ರೂ.ವರೆಗಿನ ಬೆಲೆಯ ಪಾದರಕ್ಷೆಗಳು ಮತ್ತು ಸಿದ್ಧ ಉಡುಪುಗಳ ಮೇಲಿನ ತೆರಿಗೆಯನ್ನು ಶೇ.5ಕ್ಕೆ ಇಳಿಸಲು ಜಿಎಸ್‌ಟಿ ಮಂಡಳಿಯು ಒಪ್ಪಿಗೆ ನೀಡಿದೆ.ಪ್ರಸ್ತುತ, 1,000 ರೂ.ವರೆಗಿನ ವಸ್ತುಗಳಿಗೆ ಶೇ. 5 ಮತ್ತು ಅದಕ್ಕಿಂತ ಹೆಚ್ಚಿನ ಬೆಲೆಯ ವಸ್ತುಗಳಿಗೆ ಶೇ.12ರಷ್ಟು ತೆರಿಗೆ ವಿಧಿಸಲಾಗುತ್ತಿದೆ.
ಈ ಹಿಂದೆ ಜಾರಿಯಲ್ಲಿದ್ದ 4 ಜಿಎಸ್‌ಟಿ ಸ್ಲ್ಯಾಬ್‌ಗಳನ್ನು ಕೇಂದ್ರ ಸರ್ಕಾರ 2 ಸ್ಲ್ಯಾಬ್‌ಗಳಿಗೆ ಇಳಿಸಿದೆ.ಸದ್ಯ ಅಸ್ತಿತ್ವದಲ್ಲಿರುವ ಶೇ.12 ಮತ್ತು ಶೇ.28ರ ಸ್ಲ್ಯಾಬ್‌ಗಳನ್ನು ರದ್ದುಗೊಳಿಸಲಾಗಿದ್ದು ಇನ್ನು ಮುಂದೆ ಶೇ.5 ಮತ್ತು ಶೇ.18ರ ಸ್ಲ್ಯಾಬ್ ದರಗಳು ಮಾತ್ರ ಜಾರಿಯಲ್ಲಿರುತ್ತವೆ.ಆರೋಗ್ಯ, ಜೀವವಿಮೆ ಮೇಲಿನ ಜಿಎಸ್‌ಟಿಯನ್ನು ಸಹ ರದ್ದುಪಡಿಸಲಾಗಿದೆ.ಜಿಒಎಂನ ಎಲ್ಲಾ ಶಿ-ರಸುಗಳನ್ನು ಜಿಎಸ್ಟಿ ಮಂಡಳಿಯು ಅನುಮೋದಿಸಿದೆ. ಎಲ್ಲಾ ರಾಜ್ಯಗಳು ಈ ಪ್ರಸ್ತಾವನೆಗಳಿಗೆ ಸರ್ವಾನುಮತದಿಂದ ಒಪ್ಪಿಕೊಂಡಿವೆ.ದಸರಾ ಹಬ್ಬಕ್ಕೂ ಮುನ್ನ ಮಧ್ಯಮ ವರ್ಗದ ಜನರಿಗೆ ಕೇಂದ್ರ ಸರ್ಕಾರ ಈ ಮೂಲಕ ಸಿಹಿಸುದ್ದಿ ನೀಡಿದೆ.
ಇದು ಸಾಮಾನ್ಯ ಜನರು,ರೈತರು,ಎಂಎಸ್‌ಎಂಇಗಳು, ಮಧ್ಯಮ ವರ್ಗ,ಮಹಿಳೆಯರು ಮತ್ತು ಯುವಕರಿಗೆ ಪ್ರಯೋಜನವನ್ನು ನೀಡುತ್ತದೆ.56ನೇ ಜಿಎಸ್‌ಟಿ ಕೌನ್ಸಿಲ್ ಸಭೆಯ ಬಳಿಕ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸುದ್ದಿಗೋಷ್ಠಿ ನಡೆಸಿ, ಮಧ್ಯಮ ವರ್ಗ ಮತ್ತು ಸಾಮಾನ್ಯ ಜನರ ಬಳಕೆಯ ವಸ್ತುಗಳ ಮೇಲಿನ ಜಿಎಸ್‌ಟಿ ದರವನ್ನು ಸಂಪೂರ್ಣವಾಗಿ ಕಡಿಮೆ ಮಾಡಲಾಗಿದೆ ಎಂದು ನಿರ್ಮಲಾಸೀತಾರಾಮನ್ ತಿಳಿಸಿದರು.
ಕಾರುಗಳ ಬೆಲೆಯಲ್ಲಿ ಭಾರೀ ಇಳಿಕೆ
ಜಿಎಸ್‌ಟಿ ಸ್ಲ್ಯಾಬ್‌ಗಳ ಪರಿಷ್ಕರಣೆಯಲ್ಲಿ ಕಾರುಗಳ ಮೇಲಿನ ಜಿಎಸ್‌ಟಿಯನ್ನು ಶೇ.28ರಿಂದ ಶೇ.18ಕ್ಕೆ ಇಳಿಸಲಾಗಿದ್ದು, ಹಬ್ಬದ ಅವಽಯಲ್ಲಿ ವಾಹನಗಳ ಬೆಲೆಯಲ್ಲಿ ಭಾರೀ ಕಡಿತವಾಗಲಿದೆ.
12 ಶೇ.ಅಥವಾ 18ಶೇ.ದಿಂದ 5ಶೇ.ಗೆ ಇಳಿದಿರುವ ವಸ್ತುಗಳು
ಕೇಶ ತೈಲ (ಹೇರ್ ಆಯಿಲ್) ಟಾಯ್ಲೆಟ್ ಸೋಪ್, ಸೋಪ್ ಬಾರ್‌ಗಳು, ಶಾಂಪೂ, ಶೇವಿಂಗ್ ಕ್ರೀಮ್ ,ಟೂತ್‌ಬ್ರಶ್, ಟೂತ್‌ಪೇಸ್ಟ್ ಸೈಕಲ್ ,ಟೇಬಲ್ ವೇರ್, ಕಿಚನ್ ವೇರ್ ಮತ್ತು ಇತರೆ ಮನೆಯ ಉಪಕರಣಗಳು ಬೆಣ್ಣೆ, ತುಪ್ಪ, ಚೀಸ್ ಮತ್ತು ಡೈರಿ ಸ್ಪ್ರೆಡ್‌ಗಳು, ನಾಮ್‌ಕೀನ್‌ಗಳು, ಪಾತ್ರೆಗಳು ಫೀಡಿಂಗ್ ಬಾಟಲಿಗಳು, ಶಿಶುಗಳಿಗೆ ನ್ಯಾಪ್‌ಕಿನ್‌ಗಳು ಮತ್ತು ಕ್ಲಿನಿಕಲ್ ಡೈಪರ್‌ಗಳು ಹೊಲಿಗೆ ಯಂತ್ರಗಳು
ಶೂನ್ಯಕ್ಕೆ ಇಳಿದಿರುವ ವಸ್ತುಗಳು
ಅಲ್ಟ್ರಾ-ಹೈ ಟೆಂಪರೇಚರ್ ಹಾಲು ಪನೀರ್, ರೊಟ್ಟಿ, ಪರೋಟಾ, 33 ಜೀವರಕ್ಷಕ ಔಷಧಗಳು, ಕ್ಯಾನ್ಸರ್ ಔಷಧಿಗಳು, ಅಪರೂಪದ ಕಾಯಿಲೆಗಳಿಗೆ ಔಷಧಿಗಳು, ವೈಯಕ್ತಿಕ ಜೀವ ವಿಮೆ, ಆರೋಗ್ಯ ಪಾಲಿಸಿಗಳು
28ಶೇ.ದಿಂದ ಶೇ.18ಕ್ಕೆ ಇಳಿದಿರುವ ವಸ್ತುಗಳು
ಹವಾನಿಯಂತ್ರಣ ಯಂತ್ರಗಳು (ಎಸಿ),32 ಇಂಚುಗಳಿಗಿಂತ ದೊಡ್ಡದಾದ ಟಿವಿಗಳು (ಎಲ್ಲಾ ಟಿವಿಗಳು ಈಗ 18% ಜಿಎಸ್‌ಟಿ ವ್ಯಾಪ್ತಿಗೆ),ಡಿಶ್‌ವಾಷಿಂಗ್ ಯಂತ್ರಗಳು, ಸಣ್ಣ ಕಾರುಗಳು, 350 ಸಿಸಿ ಅಥವಾ ಅದಕ್ಕಿಂತ ಕಡಿಮೆ ಸಾಮರ್ಥ್ಯದ ಬೈಕ್‌ಗಳು, ಬಸ್‌ಗಳು, ಟ್ರಕ್‌ಗಳು, ಆ್ಯಂಬ್ಯುಲೆನ್ಸ್ಗಳು, ಎಲ್ಲಾ ಆಟೋ ಭಾಗಗಳು, ತ್ರಿಚಕ್ರ ವಾಹನಗಳು, ಸಿಮೆಂಟ್