ಸೆ.7:ತಾಲೂಕು ಬಿಲ್ಲವ ಸಂಘದಿಂದ ಬ್ರಹ್ಮಶ್ರೀ ನಾರಾಯಣಗುರು 171ನೇ ಜನ್ಮದಿನಾಚರಣೆ

0

ಪುತ್ತೂರು: ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘ ಪುತ್ತೂರು ಮತ್ತು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಮಂದಿರದ ವತಿಯಿಂದ ಸೆ.7 ರಂದು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 171ನೇ ಜನ್ಮ ದಿನಾಚರಣೆ ಕಾರ್ಯಕ್ರಮ ಪುತ್ತೂರು ಬಿಲ್ಲವ ಸಂಘದ ಸಭಾಂಗಣದಲ್ಲಿ ನಡೆಯಲಿದೆ.


ಬೆಳಿಗ್ಗೆ ನಡೆಯುವ ಸಭಾ ಕಾರ್ಯಕ್ರಮವನ್ನು ಹಿರಿಯ ಪತ್ರಕರ್ತರು ಮತ್ತು ಮುಖ್ಯಮಂತ್ರಿಗಳ ಮಾಜಿ ಮಾಧ್ಯಮ ಸಲಹೆಗಾರ ದಿನೇಶ್ ಅಮೀನ್‌ಮಟ್ಟುರವರು ಉದ್ಘಾಟಿಸಲಿದ್ದಾರೆ. ಪುತ್ತೂರು ಬ್ರಹ್ಮಶ್ರೀ ನಾರಾಯಣ ಗುರುಸ್ವಾಮಿ ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿರವರು ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಅಶೋಕ್ ಕುಮಾರ್ ರೈ, ಬೆಂಗಳೂರು ಬಿಲ್ಲವರ ಅಸೋಸಿಯೇಷನ್ ಗೌರವಾಧ್ಯಕ್ಷ ಗೋಪಾಲಕೃಷ್ಣ ನೆಕ್ಕಿತ್ತಪುಣಿ, ವಿಟ್ಲ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ರುಕ್ಮಯ್ಯ ಪೂಜಾರಿ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಸದಾಶಿವ ಉಳ್ಳಾಲ, ಬಂಟ್ವಾಳ ಪಂಚಾಯತ್ ರಾಜ್ ಇಂಜಿನಿಯರ್ ವಿಬಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಾರನಾಥ ಸಾಲಿಯಾನ್ ಪಿ, ಚಲನಚಿತ್ರ ನಿರ್ದೇಶಕರು ಹಾಗೂ ಆಪ್ತ ಸಮಾಲೋಚಕರಾದ ಸ್ಮಿತೇಶ್ ಎಸ್.ಬಾರ್ಯರವರು ಭಾಗವಹಿಸಲಿದ್ದಾರೆ.


ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮ:
ಬೆಳಿಗ್ಗೆ(7.30)ರಿಂದ ನವೀನ್ ಶಾಂತಿ ಅಡ್ಯಾಲು ಅಜಿಲಮೊಗರು ಇವರ ಪೌರೋಹಿತ್ಯದಲ್ಲಿ ಪ್ರಾರ್ಥನೆ, ಗಣಹೋಮ, ಪಂಚಾಮೃತಾಭಿಷೇಕ, ಗುರುಪೂಜೆ ಬಳಿಕ ಸುಳ್ಯಪದವು ಆಲಂಕಾರು, ಶಾಂತಿಗೋಡು ಬಿಲ್ಲವ ಗ್ರಾಮ ಸಮಿತಿಯಿಂದ ಭಜನಾ ಕಾರ್ಯಕ್ರಮ, ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ, ಪ್ರಸಾದ ಭೋಜನ ನಡೆಯಲಿದೆ. ಅವಿಭಜಿತ ಪುತ್ತೂರು ಹಾಗೂ ಕಡಬ ತಾಲೂಕಿನ 55 ಬಿಲ್ಲವ ಗ್ರಾಮ ಸಮಿತಿ, ಬಿಲ್ಲವ ಮಹಿಳಾ ವೇದಿಕೆ ಪುತ್ತೂರು, ಯುವವಾಹಿನಿ ಪುತ್ತೂರು ಘಟಕ, ಉಪ್ಪಿನಂಗಡಿ ಹಾಗೂ ಕಡಬ ಘಟಕಗಳು, ಪುತ್ತೂರು ಬಿಲ್ಲವ ವಿದ್ಯಾರ್ಥಿ ಸಂಘದ ಸಹಕಾರದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಅಪರಾಹ್ನ ಸಾಂಸ್ಕೃತಿಕ ಕಾರ್ಯಕ್ರಮ ಜರಗಲಿದೆ.


ಪ್ರತಿಭಾ ಪುರಸ್ಕಾರ:
2024-25ನೇ ವರ್ಷದ ಎಸೆಸ್ಸೆಲ್ಸಿಯಲ್ಲಿ ಶೇ.95 ಮತ್ತು ಮೇಲ್ಟಟ್ಟು ಅಂಕ ಗಳಿಸಿದವರಿಗೆ, ಪಿಯುಸಿ, ಐಟಿಐ, ಡಿಎಡ್ ಅಂತಿಮ ಪರೀಕ್ಷೆಯಲ್ಲಿ ಶೇ.90 ಮತ್ತು ಮೇಲ್ಪಟ್ಟು ಅಂಕ ಗಳಿಸಿದವರಿಗೆ, ಎಲ್ಲಾ ತರದ ಡಿಗ್ರಿ, ಡಿಪ್ಲೋಮಾ, ಬಿಬಿಎಂ, ಬಿಸಿಎ, ಬಿಎಡ್, ಎಲ್‌ಎಲ್‌ಬಿ ಇತ್ಯಾದಿ ಕೋರ್ಸಿನ ಅಂತಿಮ ಪರೀಕ್ಷೆಯಲ್ಲಿ ಶೇ.85 ಮತ್ತು ಮೇಲ್ಪಟ್ಟ ಅಂಕ ಗಳಿಸಿದವರಿಗೆ, ಎಲ್ಲಾ ಸ್ನಾತಕೋತ್ತರ, ವೈದ್ಯಕೀಯ, ತಾಂತ್ರಿಕ ಎಂಸಿಎ, ಎಂಬಿಎ, ಎಂಎಸ್‌ಡಬ್ಲ್ಯೂ, ಎಂಎ, ಎಂಕಾಂ, ಎಂಟೆಕ್ ಕೋರ್ಸಿನ ಅಂತಿಮ ಪರೀಕ್ಷೆಯಲ್ಲಿ ಶೇ.80 ಮತ್ತು ಮೇಲ್ಪಟ್ಟು ಅಂಕಗಳನ್ನು ಪಡೆದ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಗೆ ಪ್ರತಿಭಾ ಪುರಸ್ಕಾರ ನಡೆಯಲಿದೆ.


ಸನ್ಮಾನ/ಗೌರವಾರ್ಪಣೆ/ಅಭಿನಂದನೆ:
ಐಪಿಎಸ್, ಐಎಎಸ್, ಕೆಎಎಸ್, ಕೆಇಎಸ್, ಪಿಎಚ್‌ಡಿ, ಸಿಎ ಪದವಿ ಪಡೆದವರಿಗೆ, 2024-25ರ ಸಾಲಿನಲ್ಲಿ ವಿವಿಧ ಕ್ಷೇತ್ರಗಳಲ್ಲಿ ರಾಷ್ಟ್ರಪ್ರಶಸ್ತಿ ಅಥವಾ ರಾಜ್ಯಪ್ರಶಸ್ತಿ ಪಡೆದವರಿಗೆ ಮತ್ತು ವಿವಿಧ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಐದು ಮಹನೀಯರಿಗೆ, 2024-25ರಲ್ಲಿ ಜಿಲ್ಲಾಮಟ್ಟಕ್ಕಿಂತ ಮೇಲ್ಪಟ್ಟ ಕ್ರೀಡಾ ಕ್ಷೇತ್ರ, ಕಲಾ ಕ್ಷೇತ್ರ, ಸಾಹಿತ್ಯ, ವಿಜ್ಞಾನ ಕ್ಷೇತ್ರದಲ್ಲಿನ ಪ್ರತಿಭೆ ಹೊಂದಿದ ಸಮಾಜ ಬಾಂಧವರಿಗೆ ಸನ್ಮಾನ, ಗೌರವಾರ್ಪಣೆ, ಅಭಿನಂದನೆ ಕಾರ್ಯಕ್ರಮ ನಡೆಯಲಿದೆ.


ವಿದ್ಯಾನಿಧಿ ಯೋಜನೆ:
ಬಿಲ್ಲವ ಸಮಾಜದ ಬಡ ವಿದ್ಯಾರ್ಥಿಗಳ ವಿದ್ಯಾರ್ಥಿವೇತನ, ಸಹಾಯಧನ, ಪ್ರತಿಭಾ ಪುರಸ್ಕಾರ ಇತ್ಯಾದಿ ಉದ್ಧೇಶಗಳಿಗಾಗಿ ಸ್ಥಾಪಿಸಿದ ವಿನೂತನ ವಿದ್ಯಾನಿಧಿ ಯೋಜನೆಗೆ ಸಮಾಜ ಬಾಂಧವರ ಧನ ಸಹಾಯದ ಸಹಭಾಗಿತ್ವವನ್ನು ಕೋರಲಾಗಿದೆ. ಸಹಾಯಧನವನ್ನು ನೀಡ ಬಯಸುವವರು ವಿದ್ಯಾನಿಧಿ ಯೋಜನೆಯ ಸಂಚಾಲಕರಾದ ಉಲ್ಲಾಸ್ ಕೋಟ್ಯಾನ್, ಸದಸ್ಯರಾದ ಗಿರೀಶ್ ಸಾಲ್ಯಾನ್ ಬದನೆ, ರವಿ ಕಲ್ಕಾರು, ರಾಜೇಶ್ ನೆಲ್ಲಿತ್ತಡ್ಕರವರನ್ನು ಸಂಪರ್ಕಿಸುವಂತೆ ಬಿಲ್ಲವ ಸಂಘ ಮನವಿ ಮಾಡಿದೆ.


ಬ್ರಹ್ಮಶ್ರೀ ನಾರಾಯಣ ಗುರುಸ್ವಾಮೀಜಿಯವರ 171ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಬಿಲ್ಲವ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಾಗಬೇಕಾಗಿ ಪುತ್ತೂರು ಬಿಲ್ಲವ ಸಂಘದ ಅಧ್ಯಕ್ಷ ಸತೀಶ್ ಕುಮಾರ್ ಕೆಡೆಂಜಿ, ಪ್ರಥಮ ಉಪಾಧ್ಯಕ್ಷರಾದ ಚಿದಾನಂದ ಸುವರ್ಣ, ದ್ವಿತೀಯ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾವತಿ ಕೇಕುಡೆ, ಕಾರ್ಯದರ್ಶಿ ಬಿ.ಟಿ ಮಹೇಶ್ಚಂದ್ರ ಸಾಲ್ಯಾನ್, ಜೊತೆ ಕಾರ್ಯದರ್ಶಿ ಪುರುಷೋತ್ತಮ ಬರೆಂಬೆಟ್ಟು, ಕೋಶಾಧಿಕಾರಿ ಜನಾರ್ದನ ಪೂಜಾರಿ ಪದಡ್ಕ, ಬ್ರಹ್ಮಶ್ರೀ ನಾರಾಯಣ ಗುರುಮಂದಿರದ ಸಂಚಾಲಕ ಅಶೋಕ್ ಕುಮಾರ್ ಪಡ್ಪು, ಸದಸ್ಯರಾದ ಮೋಹನ್ ತೆಂಕಿಲ, ಮಾಧವ ಸಾಲ್ಯಾನ್ ಕುರೆಮಜಲು, ಶ್ರೀಮತಿ ವಿಮಲ ಸುರೇಶ್‌ರವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಕಡಬ ತಾಲೂಕಿನಲ್ಲಿಯೂ ಬಿಲ್ಲವ ಸಂಘದ ಸ್ಥಾಪನೆ ಆಶಯ ಹೊಂದಿದ್ದೇವೆ..
ಪ್ರತಿ ವರ್ಷದಂತೆ ಈ ವರ್ಷವೂ ಕೂಡ ಬ್ರಹ್ಮಶ್ರೀ ನಾರಾಯಣ ಗುರುಗಳ ಜನ್ಮದಿನಾಚರಣೆಯನ್ನು ಬಹಳ ಅದ್ದೂರಿಯಿಂದ ಆಚರಣೆ ಮಾಡುತ್ತಿದ್ದೇವೆ. ಪುತ್ತೂರಿನ ಬಿಲ್ಲವ ಸಂಘದಲ್ಲಿನ ೫೫ ಗ್ರಾಮ ಸಮಿತಿಯ ಮುಖಾಂತರ ಅವಿಭಜಿತ ಪುತ್ತೂರು ಹಾಗೂ ಕಡಬ ತಾಲೂಕಿನ ಸಮಾಜ ಬಾಂಧವರು ಸುಮಾರು ಮೂರು ಸಾವಿರದಷ್ಟು ಗುರುಪೂಜೆಯನ್ನು ಮಾಡಿದ್ದಾರೆ. ಕಳೆದ ವರ್ಷ ಗುರುಗಳ ಜನ್ಮದಿನಾಚರಣೆ ಸಂದರ್ಭ ನಮ್ಮ ಸಮಾಜ ಬಾಂಧವರ ಕೊಡುಗೆಯೊಂದಿಗೆ ಬೆಳ್ಳಿ ಕಿರೀಟವನ್ನು ಸಮರ್ಪಿಸಿದ್ದೇವೆ. ಗುರುಗಳ ತತ್ವ ಸಿದ್ಧಾಂತವಾದ ಒಂದೇ ಜಾತಿ, ಒಂದೇ ದೇವರು, ಒಂದೇ ಮತ ಎಂಬಂತೆ ಸಾಧನೆಗೈದ ಸಮಾಜ ಬಾಂಧವರನ್ನು ಗೌರವಿಸುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈಗಾಗಲೇ ಪುತ್ತೂರು ಹಾಗೂ ಕಡಬ ತಾಲೂಕು ಒಟ್ಟಾಗಿ ಕಾರ್ಯನಿರ್ವಹಿಸುತ್ತಿದ್ದು ಮುಂದಿನ ದಿನಗಳಲ್ಲಿ ಕಡಬ ತಾಲೂಕಿನಲ್ಲಿಯೂ ಬಿಲ್ಲವ ಸಂಘವನ್ನು ಸ್ಥಾಪನೆ ಮಾಡುವ ಆಶಯವಿದೆ. ಕಳೆದ ಮೂರು ವರ್ಷಗಳಿಂದ ಎಸೆಸ್ಸೆಲ್ಸಿಯಿಂದ ಸ್ನಾತಕೋತ್ತರ ಪದವಿ ತನಕ ಅರ್ಹ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನವನ್ನು ನೀಡುತ್ತಾ ಬಂದಿದ್ದು ಈ ವರ್ಷವೂ ಸುಮಾರು 250 ಮಂದಿಗೆ ವಿದ್ಯಾರ್ಥಿವೇತನವನ್ನು ನೀಡುತ್ತಿದ್ದೇವೆ. ಬಿಲ್ಲವ ಗ್ರಾಮ ಸಮಿತಿಯ 55 ಗ್ರಾಮ ಸಮಿತಿಗಳು, 13 ವಲಯ ಸಂಚಾಲಕರು, ಯುವವಾಹಿನಿ ಘಟಕ, ಬಿಲ್ಲವ ಮಹಿಳಾ ವೇದಿಕೆ, ಬಿಲ್ಲವ ವಿದ್ಯಾರ್ಥಿ ಸಂಘ ಕಾರ್ಯಕ್ರಮ ಯಶಸ್ವಿಗೊಳಿಸುವ ನಿಟ್ಟಿನಲ್ಲಿ ಸಂಪೂರ್ಣ ಸಹಕರಿಸುತ್ತಿದ್ದಾರೆ.

-ಸತೀಶ್ ಕುಮಾರ್ ಕೆಡೆಂಜಿ, ಅಧ್ಯಕ್ಷರು, ಬಿಲ್ಲವ ಸಂಘ, ಪುತ್ತೂರು


ಸನ್ಮಾನ..
ಈ ಸಂದರ್ಭದಲ್ಲಿ ಬೆಳ್ತಂಗಡಿ ಶ್ರೀ ಗುರುದೇವ ವಿವಿಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಭಗೀರಥ ಜಿ, ಮಂಗಳೂರು ನಂದಾದೀಪ ಫೌಂಡೇಶನ್ ಮತ್ತು ಬಿಲ್ಲವ ಬ್ರಿಗೇಡ್ ಕೇಂದ್ರೀಯ ಮಂಡಳಿಯ ಸಂಸ್ಥಾಪಕ ಸದಾನಂದ ಪೂಜಾರಿ, ಪುತ್ತೂರು ಬಿಲ್ಲವ ಸಂಘದ ವಿದ್ಯಾನಿಧಿ ಬಿಲ್ಲವ ಸಂಘದ ಸ್ಥಾಪಕ ಸಂಚಾಲಕ ಕ್ಯಾ|ಚಿದಾನಂದ ನಾಡಾಜೆರವರುಗಳನ್ನು ಸನ್ಮಾನಿಸಲಾಗುತ್ತದೆ.

LEAVE A REPLY

Please enter your comment!
Please enter your name here