ಪುತ್ತೂರು: ಸಂತ ಫಿಲೋಮಿನಾ ಆಂಗ್ಲ ಮಾಧ್ಯಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು.
ಶಾಲಾ ಸಂಚಾಲಕರಾದ ಧರ್ಮಗುರು ಲಾರೆನ್ಸ್ ಮಸ್ಕರೇನಸ್ ರವರು ಅಧ್ಯಕ್ಷತೆ ವಹಿಸಿ, ವ್ಯಕ್ತಿಯ ಬೆಳವಣಿಗೆಗೆ ಶಿಕ್ಷಣವು ಅತಿ ಮುಖ್ಯ ಸಾಧನ. ಶಿಕ್ಷಕರ ಪರಿಶ್ರಮದಿಂದ ಸಮಾಜಕ್ಕೆ ಅತ್ಯುತ್ತಮ ಕೊಡುಗೆಗಳನ್ನು ನೀಡಲು ಸಾಧ್ಯ ಎಂದು ಹೇಳಿ, ಶಿಕ್ಷಕರಿಗೆ ಶುಭಾಶಯಗಳನ್ನು ತಿಳಿಸಿದರು.
ಮಾಯಿದೆ ದೇವುಸ್ ಚರ್ಚ್ ಪಾಲನಾ ಸಮಿತಿಯ ಉಪಾಧ್ಯಕ್ಷ ಜೆರಾಲ್ಡ್ ಡಿಕೋಸ್ಟ,ಶಾಲಾ ರಕ್ಷಕ -ಶಿಕ್ಷಕ ಸಂಘದ ಉಪಾಧ್ಯಕ್ಷ ಮುಕೇಶ್, ಶಾಲಾ ಮುಖ್ಯೋಪಾಧ್ಯಾಯನಿ ಲೋರ ಪಾಯಸ್ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು, ಪ್ರಾಸ್ತವಿಕ ಮಾತುಗಳನ್ನಾಡಿ, ಶಿಕ್ಷಕರಿಗೆ ಶುಭಾಶಯಗಳನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಸಂಚಾಲಕರು ತಾಲೂಕು ಹಾಗೂ ಜಿಲ್ಲಾ ಮಟ್ಟದ ಟೇಬಲ್ ಟೆನ್ನಿಸ್ ಪಂದ್ಯಾಟದಲ್ಲಿ ವಿಜೇತರಾದ ವಿದ್ಯಾರ್ಥಿಗಳನ್ನು ಗೌರವಿಸಿದರು ಹಾಗೂ ಶಿಕ್ಷಕರಿಗೆ ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೆನಪಿನ ಕಾಣಿಕೆಯನ್ನು ವಿತರಿಸಲಾಯಿತು.
ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ನೀಡಿ ಮನರಂಜಿಸಿದರು. ಶಾಲಾ ನಾಯಕ ಅಬ್ದುಲ್ ಮನಾಫ್ ಸ್ವಾಗತಿಸಿ,ಶಾಲಾ ಉಪನಾಯಕಿ ಲಿನ್ ಲೋಬೊ ವಂದಿಸಿ ಸೋನಲ್ ಕಾರ್ಯಕ್ರಮವನ್ನು ನಿರೂಪಿಸಿದರು.