ಬೆಟ್ಟಂಪಾಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜು ಬೆಟ್ಟಂಪಾಡಿಯಲ್ಲಿ ರಾಣಿ ಅಬ್ಬಕ್ಕಳ ಐದು ನೂರನೆಯ ವರ್ಷಾಚರಣೆ ಅಂಗವಾಗಿ ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.
ಕಾಲೇಜು ಅಭಿವೃದ್ಧಿ ಸಮಿತಿ ಸದಸ್ಯ ಮಂಜುಳಗಿರಿ ವೆಂಕಟ್ರಮಣ ಭಟ್ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ, ರಾಣಿ ಅಬ್ಬಕ್ಕನ ಜೀವನ ಚರಿತ್ರೆಯು ಮಹಿಳೆಯರಿಗೆ ಪ್ರೇರಣಾ ದಾಯಕ ಮತ್ತು ಮಹಿಳೆ ಅಬಲೆಯಲ್ಲ ಸಬಲೆ ಎಂಬುದನ್ನು ಜೀವನದುದ್ದಕ್ಕೂ ಸಾಧಿಸಿ ತೋರಿಸಿದವಳು ಮತ್ತು ಧೈರ್ಯಮ್ ಸರ್ವತ್ರ ಸಾಧನಂ ಎಂಬುದನ್ನು ಮಾಡಿ ತೋರಿಸಿದವಳು ಎಂದು ಹೇಳಿದರು.

ಸಂಪನ್ಮೂಲ ವ್ಯಕ್ತಿಯಾಗಿ ಅಖಿಲ ಭಾರತ ಸಾಹಿತ್ಯ ಪರಿಷತ್ ನ ಸಹಕಾರ್ಯದರ್ಶಿ ಲತೇಶ್ ಬಾಕ್ರಬೈಲ್ ಆಗಮಿಸಿ ಮಾತನಾಡಿ, ಪೋರ್ಚುಗೀಸರ ವಿರುದ್ಧ ಹೋರಾಡಿದ ವೀರ ನಾರಿ ಮತ್ತು ಅಪ್ರತಿಮ ದೇಶ ಭಕ್ತೆ ರಾಣಿ ಚೆನ್ನಮ್ಮನ ಬಗ್ಗೆ ನಾವೆಲ್ಲರೂ ತಿಳಿದುಕೊಳ್ಳುವ ಅವಶ್ಯಕತೆ ಇದೆ. ಭಾರತೀಯ ಮಹಿಳೆಯರಿಗೆ ಎಂದಿಗೂ ಸ್ಫೂರ್ತಿಯಾ ಚಿಲುಮೆಯಾಗಿರುವ ರಾಣಿ ಅಬ್ಬಕ್ಕನ ಜೀವನ ಚರಿತ್ರೆಯನ್ನು ಇನ್ನಷ್ಟು ವಿಸ್ತರವಾಗಿ ಕಲಿಯುವ ಅಗತ್ಯವಿದೆ ಎಂಬುದಾಗಿ ಹೇಳಿದರು.
ವಿದ್ಯಾರ್ಥಿ ಕ್ಷೇಮಪಾಲಾನಾಧಿಕಾರಿ ಡಾ. ಸುಬ್ರಹ್ಮಣ್ಯ ಕೆ, ಐ ಕ್ಯೂ ಎ ಸಿ ಸಂಚಾಲಕ ಪ್ರೊ. ರಾಮಚಂದ್ರ ಡಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿರಿಯ ಇತಿಹಾಸ ಪ್ರಾಧ್ಯಾಪಕರು ಮತ್ತು ಕಾಲೇಜಿನ ನಿಕಟ ಪೂರ್ವ ಪ್ರಾಂಶುಪಾಲರೂ ಆದ ರಾಧಾಕೃಷ್ಣ ಭಟ್ ಆಗಮಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಪ್ರೊ. ದಾಮೋದರ ಕಣಜಾಲು ವಹಿಸಿದ್ದರು. ಕಾರ್ಯಕ್ರಮದ ಸಂಯೋಜಕ ಡಾ. ಪ್ರಮೋದ್ ಎಂ ಜಿ ಪ್ರಾಸ್ತಾವಿಸಿ,ಸ್ವಾಗತಿಸಿದರು. ಪ್ರಥಮ ಪದವಿ ವಿದ್ಯಾರ್ಥಿನಿಯರಾದ ಅನಿತಾ, ಧನ್ಯ, ಭಾಗ್ಯ, ಸಿಂಚನ ಪ್ರಾರ್ಥಿಸಿದರು. ಗ್ರಂಥಪಾಲಕ ಶ್ರೀ ರಾಮ ಕೆ ಕಾರ್ಯಕ್ರಮ ನಿರೂಪಿಸಿದರು.