ಪುತ್ತೂರು: ನೂತನವಾಗಿ ಆರಂಭಗೊಳ್ಳಲಿರುವ ಎವಿಜಿ ಸೌಹಾರ್ದ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯ ಲೋಕಾರ್ಪಣಾ ಸಮಾರಂಭದ ಆಮಂತ್ರಣ ಪತ್ರವನ್ನು ಸೆ.5ರಂದು ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆಗೊಳಿಸಲಾಯಿತು.
ಸೆ.29ರಂದು ಪುತ್ತೂರು ನೆಲ್ಲಿಕಟ್ಟೆ ಖಾಸಗಿ ಬಸ್ ನಿಲ್ದಾಣದ ಎದುರಿನ ಕಟ್ಟಡದಲ್ಲಿ ಎವಿಜಿ ಸೌಹಾರ್ದ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿ ಉದ್ಘಾಟನೆಗೊಳ್ಳಲಿದೆ. ಇದರ ಲೋಕಾರ್ಪಣಾ ಸಮಾರಂಭವು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ನಟರಾಜ ವೇದಿಕೆಯಲ್ಲಿ ನಡೆಯಲಿದೆ. ಈ ನಿಟ್ಟಿನಲ್ಲಿ ಆಮಂತ್ರಣ ಪತ್ರವನ್ನು ಸೆ.5ರಂದು ಬೆಳಗ್ಗೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸತ್ಯಧರ್ಮ ನಡೆಯಲ್ಲಿ ದೇವಳದ ಪ್ರಧಾನ ಅರ್ಚಕ ವೇ ಮೂ ವಿ.ಎಸ್ ಭಟ್ ಅವರ ಪ್ರಾರ್ಥನೆಯ ಮೂಲಕ ಬಿಡುಗಡೆಗೊಳಿಸಲಾಯಿತು.
ಈ ಸಂದರ್ಭ ಸೊಸೈಟಿಯ ಅಧ್ಯಕ್ಷ ಕಳುವಾಜೆ ವೆಂಕಟ್ರಮಣ ಗೌಡ, ಉಪಾಧ್ಯಕ್ಷ ಉಮೇಶ ಮಳುವೇಲು, ನಿರ್ದೇಶಕರಾದ ಎ.ವಿ.ನಾರಾಯಣ, ಗುಡ್ಡಪ್ಪ ಗೌಡ ಬಲ್ಯ, ಸೀತಾರಾಮ ಕೇವಳ, ಗಂಗಾಧರ ಎ.ವಿ, ಕೆ.ಮಾಧವ ಗೌಡ, ಉಷಾಲಕ್ಷ್ಮೀ, ತಾ.ಪಂ ಮಾಜಿ ಸದಸ್ಯೆ ಪುಷ್ಪಾವತಿ ಕಳುವಾಜೆ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೀತಾರಾಮ ಗೌಡ ಕಾಂತಿಲ ಉಪಸ್ಥಿತರಿದ್ದರು.