ಪಟ್ಟೆ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

0

ಬಡಗನ್ನೂರು: ಪಟ್ಟೆ ಇಲ್ಲಿನ ದ್ವಾರಕಾ ಪ್ರತಿಷ್ಠಾನ(ರಿ) ಪುತ್ತೂರು ಇದರ ವತಿಯಿಂದ ನಡೆಸಲ್ಪಡುವ ಶ್ರೀಕೃಷ್ಣ ವಿದ್ಯಾಸಂಸ್ಥೆಗಳಲ್ಲಿ, ಪ್ರೌಢಶಾಲಾ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟವು ಸೆ.4 ರಂದು ನಡೆಯಿತು.

ಸಮಾರಂಭವನ್ನು ದ್ವಾರಕಾ ಪ್ರತಿಷ್ಠಾನ ಅಧ್ಯಕ್ಷರು ಹಾಗೂ ಶ್ರೀಕೃಷ್ಣ ವಿದ್ಯಾ ಸಂಸ್ಥೆಗಳ ಅಧ್ಯಕ್ಷರಾದ ಗೋಪಾಲಕೃಷ್ಣ ಭಟ್ ದೀಪ ಪ್ರಜ್ವಲಿಸುವ ಮೂಲಕ ಉದ್ಘಾಟಿಸಿ, ಮಾತನಾಡಿ ಕ್ರೀಡೆ ಶಿಕ್ಷಣದ  ಮೂಲ, ಶಿಕ್ಷಣ ಮತ್ತು ಕ್ರೀಡೆ ಬೇರೆ ಆಲ್ಲ ಕ್ರೀಡೆ ಮನುಷ್ಯನ ಆರೋಗ್ಯಕ್ಕೆ ಸದೃಢ ಫಲಾಕಾರಿಯಾಗಿದೆ. ಪಂದ್ಯಾವಳಿಯಲ್ಲಿ ಸೋಲು ಗೆಲುವು ಸಾಮಾನ್ಯ  ಭಾಗವಹಿಸುವಿಕೆ ಪ್ರಮುಖವಾಗಿದೆ ಎಂದು ಹೇಳಿ ಶುಭ ಹಾರೈಸಿದರು. 

ಕುಂಬ್ರ ಕ್ಷೇತ್ರ ಸಂಪನ್ಮೂಲ ಕೇಂದ್ರದ ಮುಖ್ಯಸ್ಥೆ ಶಶಿಕಲಾ ವಾಲಿಬಾಲ್ ಪಂದ್ಯಾಟವನ್ನು ಬಾಲ್ ಹಾಕುವ ಮೂಲಕ ಸಾಂಕೇತವಾಗಿ ಉದ್ಘಾಟಿಸಿದರು. ಪುತ್ತೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಕರಾದ ಚಕ್ರಪಾಣಿ ರವರು ಪ್ರಾಸ್ತಾವಿಕ ಮಾತನಾಡಿ ಶುಭ ಹಾರೖೆಸಿದರು.

ಮುಖ್ಯ ಅತಿಥಿಗಳಾಗಿ ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ ಕುಂಬ್ರ ಕೆಪಿಎಸ್ ಸ್ಕೂಲ್ ನ ದೈಹಿಕ ಶಿಕ್ಷಣ ಶಿಕ್ಷಕರು ಹಾಗೂ ನೋಡಲ್ ಅಧಿಕಾರಿ ಕೃಷ್ಣಪ್ರಸಾದ್, ಕರ್ನಾಟಕ ರಾಜ್ಯ ಶಾಲಾ ಶಿಕ್ಷಣ ನೌಕರರ ಸಂಘ, ಅಧ್ಯಕ್ಷ ಮಾಮಚ್ಚನ್, ತಾಲೂಕು ಸಹಶಿಕ್ಷಕ ಸಂಘದ ಅಧ್ಯಕ್ಷ ಅಬ್ರಾಹಂ, ಪುತ್ತೂರು ಪುತ್ತೂರು ತಾಲೂಕು ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ಕೃಷ್ಣಯ್ಯ, ದೈಹಿಕ ಶಿಕ್ಷಕರ ಸಂಘ ಗ್ರೇಡ್ 1 ಅಧ್ಯಕ್ಷ  ಕರುಣಾಕರ,  ಪ್ರತಿಭಾ ಪ್ರೌಢಶಾಲಾ  ಎಸ್ ಡಿ ಎಂ ಸಿ ಅಧ್ಯಕ್ಷ   ಲಿಂಗಪ್ಪ ಗೌಡ ಮೋಡಿಕೆ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಎಸ್.ಡಿ.ಯಂ.ಸಿ ಅಧ್ಯಕ್ಷ  ಕೇಶವ ಪ್ರಸಾದ್ ನೀಲಗಿರಿ, ಶ್ರೀಕೃಷ್ಣ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಸತೀಶ್ ಕೊಪ್ಪಳ, ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ದೈಹಿಕ ಶಿಕ್ಷಣ ಶಿಕ್ಷಕ ಮೋನಪ್ಪ.ಎಂ ಉಪಸ್ಥಿತರಿದ್ದರು. 

ಪ್ರತಿಭಾ ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಸುಮನಾ ಬಿ, ಸ್ವಾಗತಿಸಿದರು. ಶ್ರೀ ಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಾಜಗೋಪಾಲ್ ಎನ್ ವಂದಿಸಿದರು. ಪ್ರತಿಭಾ ಪ್ರೌಢಶಾಲಾ ಸಹ ಶಿಕ್ಷಕ ವಿಶ್ವನಾಥ ಬಿ ಕಾರ್ಯಕ್ರಮ ನಿರೂಪಿಸಿದರು. ಶಿಕ್ಷಕ ವೃಂದದವರು ಸಹಕರಿಸಿದರು.

17ರ ವಯೋಮಾನದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಬೆಥನಿ ಪ್ರೌಢಶಾಲೆ ಪ್ರಥಮ ಸ್ಥಾನ ಉಪ್ಪಿನಂಗಡಿ ಇಂದ್ರಪ್ರಸ್ಥ ದ್ವಿತೀಯ ಸ್ಥಾನವನ್ನು ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಬಾಲಕಿಯರ ವಿಭಾಗದಲ್ಲಿ ಪಾಪೆಮಜಲು ಸರಕಾರಿ ಪ್ರೌಢ ಶಾಲೆ  ಪ್ರಥಮ ಸ್ಥಾನ ಹಾಗೂ ಉಪ್ಪಿನಂಗಡಿ ಸೈಂಟ್ ಮೇರಿಸ್  ದ್ವಿತೀಯ ಸ್ಥಾನವನ್ನು  ಪಡೆದುಕೊಂಡು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು.

ವೈಯಕ್ತಿಕ ಪ್ರಶಸ್ತಿ

ಬಾಲಕರ ವಿಭಾಗದಲ್ಲಿ ಬೆಸ್ಟ್ ಪಾಸರಾಗಿ ಬೆಥನಿ ಪ್ರೌಢಶಾಲೆಯ ಶಾನ್, ಬೆಸ್ಟ್ ಕಟ್ಟೌಟರಾಗಿ  ಬೆಥನಿಯ ಸವಾದ್, ಅಲ್ರೌಂಡರಾಗಿ ಇಂದ್ರಪ್ರಸ್ಥ ಆಯತುಲ್ಲಾಹ್, ವಯಕ್ತಿಕ ಪ್ರಶಸ್ತಿ ಪಡೆದುಕೊಂಡರು. ಬಾಲಕಿಯರ ವಿಭಾಗದಲ್ಲಿ ಬೆಸ್ಟ್ ಪಾಸರಾಗಿ ಪಾಪೆಮಜಲು ಸರಕಾರಿ ಪ್ರೌಢಶಾಲಾ ವಿನುತ,, ಬೆಸ್ಟ್ ಕಟ್ಟೌಟರಾಗಿ ಉಪ್ಪಿನಂಗಡಿ ಸೈಂಟ್ ಮೇರಿಸ್  ಶುತ್ರ , ಆಲ್ರೌಂಡರಾಗಿ ಸರ್ಕಾರಿ ಪ್ರೌಢಶಾಲೆ ಪಂಚಮಿ ಪ್ರಶಸ್ತಿ ಷಡೆದುುಕೊಂಡರು..

ಸಮರೋಪ ಸಮಾರಂಭ
ಸಮಾರೋಪ ಸಮಾರಂಭವು ಶ್ರೀಕೃಷ್ಣ ವಿದ್ಯಾಸಂಸ್ಥೆಗಳ ಸಂಚಾಲಕ ವಿಘ್ನೇಶ್ ಹಿರಣ್ಯ, ರವರ ಅಧ್ಯಕ್ಷತೆಯಲ್ಲಿ ನಡೆಯಿತು. ನೋಡಲ್ ಅಧಿಕಾರಿ ಕೃಷ್ಣ ಪ್ರಸಾದ್, ಪ್ರತಿಭಾ ಪ್ರೌಢಶಾಲಾ ಮುಖ್ಯ ಶಿಕ್ಷಕಿ ಸುಮನ, ಶ್ರೀಕೃಷ್ಣ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ರಾಜಗೋಪಾಲ್ ಎನ್,  ಶ್ರೀಕೃಷ್ಣ ಹಿರಿಯ ಪ್ರಾರ್ಥಮಿಕ ಶಾಲಾ ಎಸ್ ಟಿ ಎಂ ಸಿ ಅಧ್ಯಕ್ಷ  ಕೇಶವ ಪ್ರಸಾದ್ ನೀಲಗಿರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೌಢಶಾಲಾ ಸಹ ಶಿಕ್ಷಕಿ ಭವಿತಾ  ಸ್ವಾಗತಿಸಿ, ಶ್ರೀಕೃಷ್ಣ ಹಿರಿಯ ಪ್ರಾರ್ಥಮಿಕ ಶಾಲಾ ಶಿಕ್ಷಕ ರಾಮಚಂದ್ರಪ್ಪ ರವರು ವಂದಿಸಿದರು.

ಪಂದ್ಯಾವಳಿಯಲ್ಲಿ ಪುತ್ತೂರು ತಾಲೂಕಿನ ಐದು ವಲಯದಿಂದ ಸುಮಾರು 20 ತಂಡಗಳು ಭಾಗವಹಿಸಿದ್ದವು.

LEAVE A REPLY

Please enter your comment!
Please enter your name here