ಸವಣೂರು: ಸವಣೂರು ಗ್ರಾಮ ಪಂಚಾಯತ್ನ 2025-26ನೇ ಸಾಲಿನ ಪ್ರಥಮ ಹಂತದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಹಾಗೂ ರಾಜ್ಯ ಹಣಕಾಸು ಮತ್ತು 15ನೇ ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನೆಯ ವಿಶೇಷ ಗ್ರಾಮಸಭೆಯು ಸೆ.6ರಂದು ಬೆಳಿಗ್ಗೆ 10.30 ಗಂಟೆಗೆ ಗ್ರಾಮ ಪಂಚಾಯತ್ ನ ಕುಮಾರಧಾರ ಸಭಾಂಗಣದಲ್ಲಿ ನಡೆಯಲಿದೆ.
ನೋಡಲ್ ಅಧಿಕಾರಿಯಾಗಿ ಪಂಚಾಯತ್ ರಾಜ್ ಎಂಜಿನಿಯರ್ ಇಲಾಖೆಯ ಸಹಾಯಕ ಕಾರ್ಯನಿರ್ವಾಹಕ ಅಭಿಯಂತರರು ಭಾಗವಹಿಸುವರು. ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಸಲಹೆ ಸೂಚನೆಗಳನ್ನು ನೀಡುವಂತೆ ಗ್ರಾ.ಪಂ.ಅಧ್ಯಕ್ಷೆ ಸುಂದರಿ ಬಿ.ಎಸ್,ಉಪಾಧ್ಯಕ್ಷೆ ಜಯಶ್ರೀ ,ಅಭಿವೃದ್ಧಿ ಅಧಿಕಾರಿ ವಸಂತ ಶೆಟ್ಟಿ ಅವರು ತಿಳಿಸಿದ್ದಾರೆ.