ಕಾಣಿಯೂರು ಕೂಡುರಸ್ತೆಯಲ್ಲಿ ರಸ್ತೆಗೆ ವಾಲಿಕೊಂಡ ಮರ : ವಾಹನ ಸಂಚಾರಕ್ಕೆ ಅಡಚಣೆ

0

ಕಾಣಿಯೂರು: ರಾಜ್ಯದ ಪ್ರಸಿದ್ಧ ಕ್ಷೇತ್ರ ಆಗಿರುವ ಕುಕ್ಕೆ ಸುಬ್ರಹ್ಮಣ್ಯಕ್ಕೆ ಸಂಪರ್ಕಿಸುವ ರಾಜ್ಯ ಹೆದ್ದಾರಿಯಲ್ಲಿ ಕಾಣಿಯೂರು ಸಮೀಪ ಕೂಡುರಸ್ತೆ ಎಂಬಲ್ಲಿ ಮರವೊಂದು ರಸ್ತೆಗೆ ವಾಲಿಕೊಂಡಿದ್ದು, ಸದ್ಯ ಅಪಾಯದ ಸ್ಥಿತಿಯಲ್ಲಿದೆ.

ಮರ ವಾಲಿಕೊಂಡಿದ್ದರಿಂದ ಅರ್ಧ ರಸ್ತೆ ಬ್ಲಾಕ್ ಆಗಿದ್ದು, ಈ ರಸ್ತೆಯಲ್ಲಿ ಸಾವಿರಾರು ವಾಹನ ಸಂಚಾರಿಸುತ್ತಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ ಎನ್ನಲಾಗುತ್ತಿದೆ. ಈ ರಸ್ತೆಯ ಬದಿಯಲ್ಲಿರುವ ಅನೇಕ ಅಪಾಯಕಾರಿ ಮರಗಳನ್ನು ತೆರವುಗೊಳಿಸುವಂತೆ ಸಂಬಂಧ ಪಟ್ಟ ಇಲಾಖೆ ಕ್ರಮಕೈಗೊಳ್ಳಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

LEAVE A REPLY

Please enter your comment!
Please enter your name here