ಪುತ್ತೂರು: ಪುತ್ತೂರು ಮಾಯಿದೇ ದೇವುಸ್ ಹಿ.ಪ್ರಾ. ಶಾಲೆಯಲ್ಲಿ ಶಿಕ್ಷಕರ ದಿನಾಚರಣೆಯು ಚರ್ಚನ ಸಭಾಂಗಣದಲ್ಲಿ ನಡೆಯಿತು. ಶಾಲಾ ನಾಯಕ ಶ್ರೇಯಂಕ್ ಭಂಡಾರಿ ಅತಿಥಿಗಳನ್ನು ವೇದಿಕೆಗೆ ಆಹ್ವಾನಿಸಿದರು. ಡಾ. ಸರ್ವಪಳ್ಳಿ ರಾಧಾಕೃಷ್ಣನ್‌ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು. ಚರ್ಚನ ಧರ್ಮಗುರು ಅತೀ ವಂ. ಸ್ವಾಮಿ ಲಾರೆನ್ಸ್ ಮಸ್ಕರೇನಸ್‌ರವರ ಅಧ್ಯಕ್ಷತೆ ವಹಿಸಿ ಶಿಕ್ಷಕರ ದಿನದ ಮಹತ್ವ ಕುರಿತು ಮಕ್ಕಳಿಗೆ ಕಿವಿಮಾತುಗಳನ್ನಾಡಿದರು.

ಶಾಲಾ ಮುಖ್ಯೋಪಾಧ್ಯಾಯಿನಿ ಜಾನೆಟ್ ಡಿ’ಸೋಜಾ, ರಕ್ಷಕ-ಶಿಕ್ಷಕ ಸಂಘದ ಉಪಾಧ್ಯಕ್ಷೆ, ವಕೀಲೆ ರಮ್ಲತ್ ಎಂ ಸಂದರ್ಭೋಚಿತವಾಗಿ ಮಾತುಗಳನ್ನಾಡಿದರು. ಶಿಕ್ಷಕರ ದಿನಾಚರಣೆಯ ಮಹತ್ವವನ್ನು ವಿದ್ಯಾರ್ಥಿನಿ ಇಫ್ರಾ ವಿವರಿಸಿದರು. ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಶಾಲಾ ಶಿಕ್ಷಕರಿಗೆ ಹೂ ಹಾಗೂ ಶಾಲು ನೀಡಿ ಗೌರವಿಸಲಾಯಿತು. ಎಲ್ಲಾ ಶಿಕ್ಷಕರಿಗೆ ಪೂಜ್ಯ ಸಂಚಾಲಕರಿಂದ ಕಿರುಕಾಣಿಕೆ ನೀಡಲಾಯಿತು. ಆರಂಭದಲ್ಲಿ ಶಾಲಾ ರಕ್ಷಕ-ಶಿಕ್ಷಕ ಸಂಘದ ವತಿಯಿಂದ ಶಿಕ್ಷಕರಿಗಾಗಿ ವಿವಿಧ ಸ್ಪರ್ಧೆಗಳು ನಡೆದು ವಿಜೇತರಾದವರಿಗೆ ಸಭೆಯಲ್ಲಿ ಬಹುಮಾನ ವಿತರಣೆ ನಡೆಯಿತು. ಶಾಲೆಯ ಎಲ್ಲಾ ಶಿಕ್ಷಕರು ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ಮಕ್ಕಳಿಂದ ಪ್ರಾರ್ಥನೆ ಹಾಗೂ ಶುಭಾಶಯ ಗೀತೆ ನಡೆಯಿತು. ಶಾಲಾ ವಿದ್ಯಾರ್ಥಿ ವಿನಾಯಕ ಶ್ಯಾಮ ಸ್ವಾಗತಿಸಿದರು. ಶ್ರೇಯಂಕ್ ಭಂಡಾರಿ ಧನ್ಯವಾದಗೈದರು. ವಿದ್ಯಾರ್ಥಿನಿ ಶ್ರೀಹಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ಮಕ್ಕಳಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.