ಪುತ್ತೂರು: ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಪುತ್ತೂರು ದ.ಕ.ಜಿ.ಪಂ.ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಇವರ ಆಶ್ರಯದಲ್ಲಿ ಪುತ್ತೂರು ಗ್ರಾಮಾಂತರ ವಲಯ ಮಟ್ಟದ ಕಬಡ್ಡಿ ಪಂದ್ಯಾಟ ನಡೆಯಿತು.
ಇದರಲ್ಲಿ 14 ಮತ್ತು 17ರ ವಯೋಮಾನದ ಬಾಲಕ-ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಈಶ್ವರಮಂಗಲ ಶ್ರೀ ಗಜಾನನ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ 14ರ ವಯೋಮಾನದ ಬಾಲಕಿಯರ, 17ರ ವಯೋಮಾನದ ಬಾಲಕರ ಹಾಗೂ ಬಾಲಕಿಯರ ಒಟ್ಟು 3 ವಿಭಾಗದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.